ಹೊಸದಿಗಂತ ವರದಿ ಬೆಂಗಳೂರು:
ಬೆಳಗಾವಿಯಲ್ಲಿ ಇಂದು ಬಿಜೆಪಿ ಬೆಳಗಾವಿ ಮತ್ತು ಧಾರವಾಡ ವಿಭಾಗದ ನಗರಸಭೆ ಸದಸ್ಯರ ಪ್ರಶಿಕ್ಷಣ ವರ್ಗವನ್ನು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರರವರು ಉದ್ಘಾಟಿಸಿ, ಪ್ರದರ್ಶಿನಿ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಅಧ್ಯಕ್ಷ ಸಂಜಯ ಪಾಟೀಲ, ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ರಾಜೇಂದ್ರ ನೇರ್ಲಿ, ವಿಭಾಗದ ಪ್ರಭಾರಿ ಚಂದ್ರಶೇಖರ ಕವಟಗಿ, ಸಹಪ್ರಭಾರಿ ಬಸವರಾಜ ಯಂಕಂಚಿ, ವಿಭಾಗದ ಸಂಘಟನಾ ಕಾರ್ಯದರ್ಶಿ ಪ್ರಕಾಶ್ ಅಕ್ಕಲಕೋಟೆ, ಶಾಸಕ ಅಭಯ ಪಾಟೀಲ, ರಾಜ್ಯ ವಕ್ತಾರ ಮಾರುತಿ ಝೀರಲಿ, ಜಿಲ್ಲಾಧ್ಯಕ್ಷರು, ಪ್ರಮುಖರು ಮತ್ತು ನಗರಸಭಾ ಸದಸ್ಯರು ಉಪಸ್ಥಿತರಿದ್ದರು.