ಹೊಸದಿಗಂತ ವರದಿ ಮಂಗಳೂರು:
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತೆಣಿಕೆ ಮುಂದುವರಿದಿದ್ದು 01:15 ಗಂಟೆಯ ವೇಳೆಗೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ 554888 ಮತಗಳನ್ನು ಪಡೆದು ಮುನ್ನಡೆಯಲ್ಲಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ 423142 ಮತಗಳನ್ನು ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಅಭ್ಯರ್ಥಿ ಕಾಂತಪ್ಪ ಅಲಂಗಾರ್ 2969 ಮತಗಳೊಂದಿಗೆ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.
ಈ ಕ್ಷೇತ್ರದಲ್ಲಿ ನೋಟ 17318 ಮತ ಪಡೆದಿಕೊಂಡಿದೆ.