ಹೊಸದಿಗಂತ ವರದಿ, ಮೈಸೂರು:
ಇಲ್ಲಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್.ಶ್ರೀವತ್ಸ ಅವರು ಬುಧವಾರ ನಗರದಲ್ಲಿರುವ ವಿವಿಧ ಮಠಗಳಿಗೆ ಭೇಟಿ ನೀಡಿ, ಮಠಾಧೀಶರ ಆಶೀರ್ವಾದ ಪಡೆದುಕೊಂಡರು.
ಮೈಸೂರು ಸಂಸ್ಥಾನದ ರಾಜ ಗುರುಗಳಾದ ಪರಕಾಲ ಮಠದ ಪೀಠಾಧಿಪತಿಗಳಾದ ಶ್ರೀ ಅಭಿನವ ವಾಗೀಶ ಬ್ರಹ್ಮತಂತ್ರ ಸ್ವತಂತ್ರ ಪರಕಾಲ ಸ್ವಾಮಿ ಗಳ ವರ್ಧಂತಿ ಮಹೋತ್ಸವದ ಪ್ರಯುಕ್ತ ಮೈಸೂರಿನಲ್ಲಿರುವ ಪರಕಾಲ ಮಠಕ್ಕೆ ಭೇಟಿ ನೀಡಿದ ಟಿ.ಎಸ್.ಶ್ರೀವತ್ಸ ಸ್ವಾಮೀಜಿಯವರ ವಿಶೇಷ ಅನುಗ್ರಹ ಪಡೆದರು.
ಬಳಿಕ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀ ಸೋಮನಾಥ ಸ್ವಾಮಿಯವರ ಆಶೀರ್ವಾದವನ್ನು ಪಡೆದರು. ನಂತರ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಶಿವರಾತ್ರಿಶ್ವರ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದವನ್ನು ಪಡೆದರು ಈ ಸಂದರ್ಭದಲ್ಲಿ ರಾಜ್ಯ ಶಿಕ್ಷಕರ ಪ್ರಕೋಷ್ಟದ ರಾಜ್ಯ ಸಮಿತಿ ಸದಸ್ಯ ನಿರಂಜನ ಮೂರ್ತಿ, ನಗರ ಪಾಲಿಕೆಯ ಮಾಜಿ ಸದಸ್ಯ ಜಗದೀಶ್, ಬಿಜೆಪಿ ಮಾಧ್ಯಮ ಸಹ ಸಂಚಾಲಕ ಪ್ರದೀಪ್ ಕುಮಾರ್, ನಗರ ಮಾಧ್ಯಮ ಸಹ ವಕ್ತಾರ ಕೇಬಲ್ ಮಹೇಶ್, ಖಜಾಂಚಿ ಖಂಡೇಶ್, ಕಿಶೋರ್ ಇದ್ದರು