ಸೂರತ್​ನಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ: ಕಾಂಗ್ರೆಸ್ ಅಭ್ಯರ್ಥಿ ಪಕ್ಷದಿಂದ ಉಚ್ಛಾಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗುಜರಾತ್​ನ ಸೂರತ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿ(Congress Candidate) ನೀಲೇಶ್​ ಕುಂಭಾನಿ(Nilesh Kumbhani) ನಾಮಪತ್ರ ತಿರಸ್ಕೃತಗೊಳ್ಳುತ್ತಿದ್ದಂತೆ ಪಕ್ಷವು ಅವರನ್ನು ಉಚ್ಛಾಟಿಸಿದೆ.

ನೀಲೇಶ್​ ತಮ್ಮ ನಾಮಪತ್ರಗಳನ್ನು ಹಿಂಪಡೆದ ಬಳಿಕ ಬಿಜೆಪಿ ಅಭ್ಯರ್ಥಿ ಮುಖೇಶ್​ ದಲಾಲ್ ಅವರನ್ನು ಅವರೋಧವಾಗಿ ಆಯ್ಕೆ ಮಾಡಲಾಗಿತ್ತು.

ಇದೀಗ ನೀಲೇಶ್​ ಅವರನ್ನು ಕಾಂಗ್ರೆಸ್​ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿದೆ. ನೀಲೇಶ್​ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಅಮಾನತುಗೊಳಿಸಲು ಕಾಂಗ್ರೆಸ್​ ಶಿಸ್ತು ಸಮಿತಿ ನಿರ್ಧರಿಸಿದೆ. ಸೂರತ್ ಕ್ಷೇತ್ರದಿಂದ ನಾಮಪತ್ರ ರದ್ದತಿಗೆ ನೀಲೇಶ್​ ಕುಂಭಾಣಿ ಹೊಣೆಗಾರಿಕೆಯನ್ನು ಶಿಸ್ತು ಸಮಿತಿ ಹೊರಿಸಿದೆ.

ನಾಮಪತ್ರ ರದ್ದು ನಿಮ್ಮ ನಿರ್ಲಕ್ಷ್ಯ ಅಥವಾ ಬಿಜೆಪಿ ಜತೆಗಿನ ಒಡನಾಟವನ್ನು ತೋರಿಸುತ್ತದೆ ಎಂದು ಶಿಸ್ತು ಸಮಿತಿ ನಿರ್ಧಾರದಲ್ಲಿ ಹೇಳಿದೆ. ಇದರಿಂದಾಗಿ ಸೂರತ್​ನ ಜನರು ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ ಎಂದು ಹೇಳಿದ್ದಾರೆ.

ಕುಂಭಾಣಿ ಮನೆ ಮುಂದೆ ಕಾಂಗ್ರೆಸ್​ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ. ನೀಲೇಶ್​ ಅವರು ಬಿಜೆಪಿಯವರ ಒತ್ತಾಯಕ್ಕೆ ಮಣಿದು ಬಿಜೆಪಿಯಿಂದ ಕೋಟ್ಯಂತರ ರೂಪಾಯಿ ಕಬಳಿಸಿದ್ದಾರೆ ಎಂದು ಕಾಂಗ್ರೆಸ್​ ನಾಯಕರು ಆರೋಪ ಮಾಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!