ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾದ ನಿರ್ಮಲಾ ಸೀತಾರಾಮನ್, ಜಗ್ಗೇಶ್ ಹಾಗೂ ಲೆಹರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ. ಟಿ. ರವಿ, ಕೇಂದ್ರ ಸಚಿವರಾದ ಕಿಶನ್ ರೆಡ್ಡಿ, ಶ್ರೀ ಭಗವಂತ್ ಖೂಬಾ, ಶೋಭಾ ಕರಂದ್ಲಾಜೆ, ಸಚಿವರು, ಸಂಸದರು, ಶಾಸಕರು ಉಪಸ್ಥಿತರಿದ್ದರು.