ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್‌ ಒಡೆಯರ್​ ಗೆ ಭರ್ಜರಿ ಜಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ಮೈಸೂರಿನಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯದುವೀರ್ ಒಡೆಯರ್ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋತಿದ್ದಾರೆ.

ಸಿದ್ದರಾಯ್ಯನವರ ತವರು ಜಿಲ್ಲೆ ಮೈಸೂರು ಇದು ರಾಜ್ಯದಾದ್ಯಂತ ಸಾಕಷ್ಟು ಗಮನ ಸೆಳೆಯಿತು ಏಕೆಂದರೆ ರಾಜವಂಶಸ್ಥರು ಕಣಕ್ಕೆ ಇಳಿದಿದ್ದ ಕಾರಣ ಇಡೀ ರಾಜ್ಯಾದ್ಯಂತ ಭಾರೀ ಗಮನ ಸೆಳೆದಿತ್ತು. ಕಾಂಗ್ರೆಸ್‌ನಿಂದ ಯತೀಂದ್ರ ಸಿದ್ದರಾಮಯ್ಯ ಕಣಕ್ಕಿಳಿಯಬಹುದು ಎಂಬ ಲೆಕ್ಕಾಚಾರ ಕೂಡ ಇತ್ತು.

ಸದ್ಯ ಯದುವೀರ್ ಒಡೆಯರ್ ಗೆ 714906 ವೋಟ್​ಗಳು ಬಿದ್ದಿವೆ. ಎಂ. ಲಕ್ಷ್ಮಣ 604352 ಮತಗಳು ಪಡೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!