ELECTION | ‘ಬಿಜೆಪಿ ಅಭ್ಯರ್ಥಿ’ ಕುತೂಹಲಕ್ಕೆ‌ ತೆರೆ ಬೀಳಲು ಕ್ಷಣಗಣನೆ ಶುರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂಬಂಧ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.

ನವದೆಹಲಿ ಸುದ್ದಿಗಾರರ ಜೊತೆಗೆ ಮಾತನಾಡಿ ಈ ಕುರಿತು ಮಾಹಿತಿ ನೀಡಿರುವ ಮುಖ್ಯಮಂತ್ರಿ,
ಎಲ್ಲಾ 224 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಒಂದು ಹಂತದ ಮಾತುಕತೆ ನಡೆದಿದೆ. ನಾಳೆಯೂ ಮತ್ತೆ ಮುಂದುವರಿಯಲಿದೆ ಎಂದರು.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಪ್ರಮುಖ ರಾಜ್ಯ ನಾಯಕರೊಂದಿಗೆ ಸಂಭಾವ್ಯ ಹೆಸರುಗಳ ಕುರಿತು ಶನಿವಾರ ಚರ್ಚೆ ನಡೆಸಲಾಗಿದೆ. ನಾಳೆ ಒಂದು ಸ್ಪಷ್ಟ ಚಿತ್ರಣ ಹೊರಬರಲಿದೆ ಎಂದು ಸಿಎಂ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!