ವಾಯವ್ಯ ಪದವೀಧರ- ಶಿಕ್ಷಕ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ಖಚಿತ: ಎನ್. ಮಹೇಶ್ ವಿಶ್ವಾಸ

ಹೊಸದಿಗಂತ ವರದಿ, ಚಿಕ್ಕೋಡಿ
ವಾಯವ್ಯ ಪದವೀಧರ ಹಾಗೂ ಶಿಕ್ಷಕ ಕ್ಷೇತ್ರದಿಂದ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಅಭೂತ ಪೂರ್ವ ಗೆಲವು ಸಾಧಿಸಲಿದ್ದಾರೆ ಎಂದು ಮಾಜಿ‌ ಶಿಕ್ಷಣ ಸಚಿವ ಹಾಗೂ ಶಾಸಕ ಎನ್. ಮಹೇಶ್ ವಿಶ್ವಾಸ ವ್ಯಕ್ತಪಡಿಸಿದರು.
ಚಿಕ್ಕೋಡಿ ಪಟ್ಟಣದಲ್ಲಿ ನಡೆದ ಪ್ರಚಾರ ಸಭೆ ಬಳಿಕ ಸಾಯಿ ಕ್ರೇಡಿಟ್ ಸೌಹಾರ್ಯ ಸಹಕಾರಿಯ ಸಭಾಗೃಹದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಭಾಗದ ಪದವಿಧರರು ಹಾಗೂ ಶಿಕ್ಷಕರು ಪ್ರಭುದ್ದರಿದ್ದು, ವಾಯವ್ಯ ಪದವಿಧರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಹನುಮಂತ ನಿರಾಣಿ ಹಾಗೂ ಶಿಕ್ಷಕ ಕ್ಷೇತ್ರದಿಂದ ಸ್ಪರ್ಧಿಸಿರುವ ಅರುಣ ಶಾಹಾಪೂರ ಅಭೂತ ಪೂರ್ವ ಗೆಲವು ಸಾಧಿಸಲಿದ್ದಾರೆ. ಇಬ್ಬರು ಅಭ್ಯರ್ಥಿಗಳು ಈ ಹಿಂದೆ ಮಾಡಿದ ಕಾರ್ಯಗಳು ಅವರ ಗೆಲುವುಗೆ ಕಾರಣವಾಗಲಿದೆ ಎಂದರು.
ಮಾಜಿ ವಿಧಾನಪರಿಷತ್ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಪುರಸಭೆ ಅಧ್ಯಕ್ಷ ಪ್ರವೀಣ ಕಾಂಬಳೆ, ವಾಯವ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಅರುಣ ಶಾಹಾಪೂರ್, ಚಿಕ್ಕೋಡಿ- ಸದಲಗಾ ಬಿಜೆಪಿ ಮಂಡಳ ಅಧ್ಯಕ್ಷ ಸಂಜಯ ಪಾಟೀಲ, ಸತೀಶ್ ಅಪ್ಪಾಜಿಗೋಳ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!