ಇಂದು ಬಿಜೆಪಿ ಸಂಸ್ಥಾಪನಾ ದಿನದ ಸಂಭ್ರಮ ಇನ್ನಷ್ಟು ಹೆಚ್ಚಿಸಲಿದೆ ಮೋದಿ ಭಾಷಣ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು ತನ್ನ 43 ನೇ ಸಂಸ್ಥಾಪನಾ ದಿನವನ್ನು ಆಚರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ಬಿಜೆಪಿ ಸಂಸ್ಥಾಪನಾ ದಿನದಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವಾದ ಏಪ್ರಿಲ್ 14 ರವರೆಗೆ ವಿಶೇಷ ವಾರವನ್ನು ಆಚರಿಸಲು ನಿರ್ಧರಿಸಿದೆ. ಏಪ್ರಿಲ್ 11 ರಂದು ಮಹಾತ್ಮಾ ಜ್ಯೋತಿಬಾ ಫುಲೆ ಅವರ ಜನ್ಮ ಶತಮಾನೋತ್ಸವವಾಗಿದ್ದು, ಈ ಸಂದರ್ಭದಲ್ಲಿ ಪಕ್ಷದ ವತಿಯಿಂದ ಹಲವಾರು ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಶ್ರೀ ಚುಗ್ ಹೇಳಿದರು.

ಈಗಾಗಲೇ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ದೆಹಲಿಯಲ್ಲಿ ಬಿಜೆಪಿಯ 43ನೇ ಸಂಸ್ಥಾಪನಾ ದಿನದಂದು ಪಕ್ಷದ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!