ಚನ್ನಪಟ್ಟಣದಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಶಾ ಭರ್ಜರಿ ರೋಡ್ ಶೋ

ಹೊಸದಿಗಂತ ಡಿಜಿಟಲ್ ಡೆಸ್ಕ್‌: 

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಯ ಅಬ್ಬರದ ಪ್ರಚಾರ ಆರಂಭಗೊಂಡಿದೆ.

ಇಂದು ರಾಜ್ಯಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸತತ ಸಭೆ, ಸಮಾವೇಶಗಳ ಬಳಿಕ ಇದೀಗ ಚನ್ನಪಟ್ಟಣದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಅಮಿತ್ ಶಾ, ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ್ದಾರೆ.

ಒಂದೂವರೆ ಕಿಲೋಮೀಟರ್ ಸಾಗಲಿರುವ ಈ ರೋಡ್‌ಶೋನಲ್ಲಿ ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಎಚ್. ಡಿ. ಕುಮಾರಸ್ವಾಮಿ ಸಾಥ್ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!