ಗೋವಾದಲ್ಲಿ ಬಿಜೆಪಿಯ ಹ್ಯಾಟ್ರಿಕ್ ಆಡಳಿತಕ್ಕೆ ಇಂದು ಆಗಲಿದೆ ಸಿಎಂ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಪಣಜಿ: ಬಹು ನಿರೀಕ್ಷಿತ ಶಾಸಕಾಂಗ ಪಕ್ಷದ ಸಭೆಯನ್ನು ಬಿಜೆಪಿ ನಡೆಸಲಿದ್ದು, ಗೋವಾದ ಮುಂದಿನ ಮುಖ್ಯಮಂತ್ರಿ ಯಾರೆಂಬುದರ ಕುರಿತಾದ ಕುತೂಹಲ ಇಂದು ಕೊನೆಗೊಳ್ಳಲಿದೆ. ಗೋವಾದಲ್ಲಿ ಬಿಜೆಪಿಯ ಹ್ಯಾಟ್ರಿಕ್ ಅವಧಿಗೆ ಇಂದು ಮುಖ್ಯಮಂತ್ರಿ ಘೋಷಣೆ ಆಗಲಿದೆ.
ಬಿಜೆಪಿಯು ಗೋವಾ ವಿಧಾನಸಭೆಯ 40 ಸದಸ್ಯ ಸ್ಥಾನಗಳಲ್ಲಿ 20 ಸ್ಥಾನಗಳನ್ನು ಗೆದ್ದುಕೊಂಡಿದೆ. ಎಂಜಿಪಿಯ ಇಬ್ಬರು ಶಾಸಕರು ಮತ್ತು ಮೂವರು ಪಕ್ಷೇತರರ ಬೆಂಬಲವನ್ನು ಪಡೆದುಕೊಂಡಿದೆ.
ಬಿಜೆಪಿ ನಾಯಕ ಮತ್ತು ನಿಯೋಜಿತ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ಹೆಸರು ಸಿಎಂ ಹುದ್ದೆಗೆ ಚಾಲ್ತಿಯಲ್ಲಿದ್ದರೂ ಸ್ವಲ್ಪ ವಿರೋಧವನ್ನು ಎದುರಿಸುತ್ತಿದ್ದಾರೆ. ಸಾವಂತ್ ಜೊತೆಗೆ ಬಿಜೆಪಿ ಶಾಸಕ ಮತ್ತು ರಾಜ್ಯದ ಮಾಜಿ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಮತ್ತು ಗೋವಾ ಮೂಲದ ಹಿಮಾಚಲ ಪ್ರದೇಶ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರ ಹೆಸರುಗಳು ಸಿಎಂ ಸ್ಥಾನಕ್ಕೆ ಚರ್ಚೆಯಾಗುತ್ತಿವೆ.
ಗೋವಾದಲ್ಲಿ ಹೊಸ ಸರಕಾರದ ಪ್ರಮಾಣ ವಚನ ಸಮಾರಂಭವು ಮಾ. 23 ಮತ್ತು 25ರ ನಡುವೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಹಿರಿಯ ಬಿಜೆಪಿ ನಾಯಕರು ಉಪಸ್ಥಿತರಿರುತ್ತಾರೆ ಎಂದು ಗೋವಾ ಬಿಜೆಪಿ ಮುಖ್ಯಸ್ಥ ಸದಾನಂದ ಶೇಟ್ ತನವಾಡೆ ಹೇಳಿದ್ದಾರೆ.
ಜೆಪಿಯ ಕೇಂದ್ರ ವೀಕ್ಷಕರು- ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಎಲ್. ಮುರುಗನ್ ಸೋಮವಾರ ಮಧ್ಯಾಹ್ನ ಪಣಜಿಗೆ ಆಗಮಿಸಲಿದ್ದು, ರಾಜ್ಯ ರಾಜಧಾನಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಂಜೆ 4 ಗಂಟೆಗೆ ಪ್ರಾರಂಭವಾಗಲಿರುವ ನಿರ್ಣಾಯಕ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತನವಾಡೆ ತಿಳಿಸಿದ್ದಾರೆ.
ಮುಂದಿನ ಮುಖ್ಯಮಂತ್ರಿ ಯಾರೆಂದು ಸದನದ ನಾಯಕನನ್ನು ಆಯ್ಕೆ ಮಾಡಿದ ನಂತರ, ಬಿಜೆಪಿ ನಾಯಕರು ಸಂಜೆ 6 ಗಂಟೆಗೆ ರಾಜ್ಯಪಾಲ ಪಿ.ಎಸ್. ಶ್ರೀಧರನ್ ಪಿಳ್ಳೈ ಅವರನ್ನು ಭೇಟಿ ಮಾಡಿ ಸರಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.
ಕೇಂದ್ರ ಸಚಿವರಾದ ತೋಮರ್ ಮತ್ತು ಮುರುಗನ್ ಅವರಲ್ಲದೆ, ಗೋವಾ ಚುನಾವಣಾ ಉಸ್ತುವಾರಿ ದೇವೇಂದ್ರ ಫಡ್ನವಿಸ್, ಉಸ್ತುವಾರಿ ಸಿ.ಟಿ. ರವಿ ಮತ್ತು ತನವಾಡೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 5 ಗಂಟೆಯೊಳಗೆ ಮುಂದಿನ ಮುಂದಿನ ಹೆಸರನ್ನು ಪ್ರಕಟಿಸಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಗೋವಾದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ 40 ಸದಸ್ಯ ಬಲದ ಸದನದಲ್ಲಿ ಬಿಜೆಪಿ 20 ಸ್ಥಾನಗಳನ್ನು ಗೆದ್ದುಕೊಂಡಿತು. ಸರಳ ಬಹುಮತಕ್ಕೆ ಕೇವಲ ಒಂದು ಸ್ಥಾನದ ಕೊರತೆಯಿತ್ತು. ಬಿಜೆಪಿಯ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ 11, ಎಎಪಿ 2, ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ) 2, ಸ್ವತಂತ್ರರು 3, ಕ್ರಾಂತಿಕಾರಿ ಗೋವಾನ್ಸ್ 1 ಮತ್ತು ಗೋವಾ ಫಾರ್ವರ್ಡ್ ಪಾರ್ಟಿ 1 ಸ್ಥಾನಗಳನ್ನು ಗೆದ್ದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!