ಸಿಎಂ ಸಿದ್ದು, ಸಚಿವ ಡಿ.ಸುಧಾಕರ್​ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ಕಾನೂನು ಕಾರ್ಯದರ್ಶಿ ವಿವೇಕ್ ರೆಡ್ಡಿ ನೇತೃತ್ವದಲ್ಲಿ ರಾಜ್ಯಸಭಾ ಸಂಸದ ನಾಸೀರ್ ಹುಸೇನ್, ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಡಿ.ಸುಧಾಕರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.

ಬಳ್ಳಾರಿಯಲ್ಲಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅನುಮತಿ ಇಲ್ಲದೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕಳೆದ ಬಾರಿ 5 ಕೆಜಿ ಅಕ್ಕಿ ಕೊಡ್ತಿದ್ದೆ ಎಂದು ಟ್ವೀಟ್ ಮಾಡಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಚಿತ್ರದುರ್ಗದಲ್ಲಿ 70 ಸಾವಿರ ಲೀಡ್ ಕೊಟ್ಟರೆ 25 ಕೋಟಿ ರೂ. ಅನುದಾನ ಕೊಡಿಸ್ತೀನಿ ಎಂದಿದ್ದ ಸಚಿವ ಡಿ.ಸುಧಾಕರ್​​ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!