ಗೀತಾ ಶಿವರಾಜ್ ಕುಮಾರ್ ವಿರುದ್ಧ ಚುನಾವಣೆ ಆಯೋಗಕ್ಕೆ ಬಿಜೆಪಿ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಶಿವಮೊಗ್ಗ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ವಿರುದ್ಧ ಚುನಾವಣೆ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಗೀತಾ ಶಿವರಾಜ್ ಕುಮಾರ್ ಅವರು ಚುನಾವಣೆ ಸಮಯದಲ್ಲಿ ತಮ್ಮ ಸಿನಿಮಾದ ಜಾಹೀರಾತನ್ನು ನೀಡಿರುವುದರಿಂದ ಅದನ್ನು ಚುನಾವಣೆ ವೆಚ್ಚಕ್ಕೆ ಸೇರಿಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಗೀತಾ ಅವರು ಶಿವರಾಜ್ ಕುಮಾರ್ ನಟನೆಯ ಭೈರತಿ ರಣಗಲ್ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಈ ಸಿನಿಮಾದ ಜಾಹೀರಾತು ಅನ್ನು ಎಲ್ಲ ದಿನಪತ್ರಿಕೆಗಳಿಗೆ ನೀಡಲಾಗಿತ್ತು. ಜಾಹೀರಾತಿಗೆ ನೀಡಿದ ಹಣದ ಖರ್ಚನ್ನು ಚುನಾವಣೆ ವೆಚ್ಚದಲ್ಲಿ ಸೇರಿಸುವಂತೆ ಶಿಫಾರಸ್ಸು ಮಾಡಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಟ ಶಿವರಾಜ್ ಕುಮಾರ್ ಅವರು ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಪರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಆದ್ದರಿಂದ ಅವರ ಸಿನಿಮಾ, ಜಾಹೀರಾತುಗಳನ್ನು ನಿಷೇಧ ಮಾಡಬೇಕು ಎಂದು ಚುನಾವಣಾ ಆಯೋಗಕ್ಕೆ ಬಿಜೆಪಿ ಒಬಿಸಿ ಮೋರ್ಚಾ ದೂರು ನೀಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!