ಶಿಕ್ಷಣ ಸಚಿವರ ಮನೆ ಮೇಲಿನ ದಾಳಿಗೆ ಬಿಜೆಪಿ ಖಂಡನೆ

ಹೊಸದಿಗಂತ ವರದಿ ಮಡಿಕೇರಿ:

ಪಠ್ಯ ಪುಸ್ತಕ ಪರಿಷ್ಕರಣೆ ವಿರೋಧಿಸುವ ನೆಪದಲ್ಲಿ ರಾಜ್ಯದ ಸಚಿವ ನಾಗೇಶ್ ಅವರ ಮನೆಗೆ ನುಗ್ಗಿ ಬೆಂಕಿ ಹಚ್ಚಲು ಪ್ರಯತ್ನಿಸಿರುವುದನ್ನು ಖಂಡಿಸಿರುವ ಕೊಡಗು ಜಿಲ್ಲಾ ಬಿಜೆಪಿ, ಈ ಘಟನೆ ನಿಜಕ್ಕೂ ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಪಕ್ಷದ ಜಿಲ್ಲಾ ವಕ್ತಾರ ಮಹೇಶ್ ಜೈನಿ, ಈ ದೇಶದಲ್ಲಿ ಅಧಿಕಾರದಲ್ಲಿರುವಾಗ ಕಾಂಗ್ರೆಸ್ ಎಷ್ಟು ಅಪಾಯಕಾರಿಯೋ ವಿರೋಧ ಪಕ್ಷದಲ್ಲಿರೋದು ಅದಕ್ಕಿಂತ ಹೆಚ್ಚು ಅಪಾಯಕಾರಿ ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಹೇಳಿದ್ದರು. ಬುಧವಾರ ನಡೆದ ಘಟನೆ ಇದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಟೀಕಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ನಿಲುವನ್ನು ಹೋರಾಟ, ಪ್ರತಿಭಟನೆಗಳ ಮೂಲಕ ಪ್ರಶ್ನೆ ಮಾಡುವುದು ಮತ್ತು ಪರಿಹಾರ ಕಂಡುಕೊಳ್ಳುವುದು ನಿಯಮ. ಆದರೆ ಕಾಂಗ್ರೆಸ್ ಪೂರ್ವ ಯೋಜಿತವಾಗಿ ಕಾರ್ಯಕರ್ತರನ್ನು ಪ್ರಚೋದಿಸಿ ಪುಂಡಾಟಿಕೆ ಮೂಲಕ ಕಾನೂನನ್ನು ಕೈಗೆತ್ತಿಕೊಂಡಿರುವುದನ್ನು ರಾಜ್ಯದ ಜನ ಗಮನಿಸುತ್ತಿದ್ದು, ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಟಿಸಿ ಮುಂದಿನ ಚುನಾವಣೆಗ ಗೆಲ್ಲುವ ಕಾಂಗ್ರೆಸ್’ನ ಕನಸು ನನಸಾಗದು. ರಾಜ್ಯದಲ್ಲಿ ಕಾಂಗ್ರೆಸ್ ವಿರೋಧ ಪಕ್ಷದಲ್ಲಿರುವುದಕ್ಕೂ ಅವಕಾಶ ಕೊಡದೆ ಮತದಾರರು ನಿಮ್ಮನ್ನು ಧೂಳೀಪಟ ಮಾಡಲಿದ್ದಾರೆ ಎಂದು ಜೈನಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಿನ್ನೆಯ ಘಟನೆಗೆ ಕಾರಣರಾದ  ಎಲ್ಲಾ ಎನ್ಎಸ್‌ಯುಐ ಕಾರ್ಯಕರ್ತರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕೆಂದು ಮಾನ್ಯ ಗೃಹ ಸಚಿವರಲ್ಲಿ ಕೊಡಗು ಜಿಲ್ಲಾ ಬಿಜೆಪಿ ಮನವಿ ಮಾಡುತ್ತದೆ ಎಂದು ಮಹೇಶ್ ಜೈನಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!