April 24, 2026
Friday, April 24, 2026
spot_img

ಬಂಗಾಳದಲ್ಲಿ ಬಿಜೆಪಿ ಮುನ್ನಡೆ ವಿಶ್ವಾಸ: ‘ಭಯಕ್ಕೆ ಅಂತ್ಯ, ಭರವಸೆಗೆ ಆರಂಭ’ ಎಂದ ಅಮಿತ್ ಶಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದ ಬಳಿಕ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ.

ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ಭಾರೀ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೊದಲ ಹಂತದಲ್ಲಿ ಮತದಾನವಾದ 152 ಕ್ಷೇತ್ರಗಳಲ್ಲಿ 110ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ದಾಖಲೆ ಮಟ್ಟದ ಮತದಾನ—ಸುಮಾರು 92 ಶೇಕಡಕ್ಕೂ ಹೆಚ್ಚು—ರಾಜ್ಯದಲ್ಲಿ ಬದಲಾವಣೆಯ ಸೂಚನೆ ಎಂದು ಶಾ ಅಭಿಪ್ರಾಯಪಟ್ಟಿದ್ದಾರೆ. ಜನರು “ಭಯದಿಂದ ನಂಬಿಕೆಗೆ” ಸಾಗುತ್ತಿದ್ದಾರೆ ಎಂದು ಹೇಳಿದ ಅವರು, ಮುಂದಿನ ಹಂತಗಳಲ್ಲೂ ಇದೇ ಟ್ರೆಂಡ್ ಮುಂದುವರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ:

ಆಡಳಿತದಲ್ಲಿರುವ ತ್ರಿಣಮೂಲ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಾ, ದೀದಿ ಹೋಗಲಿದ್ದಾರೆ, ಬಿಜೆಪಿ ಬರಲಿದೆ ಎಂದು ಘೋಷಿಸಿದರು. ಬಿಜೆಪಿ ಅಧಿಕಾರಕ್ಕೆ ಬಂದರೆ ಸ್ಥಳೀಯ ನಾಯಕನೇ ಮುಖ್ಯಮಂತ್ರಿ ಆಗಲಿದ್ದು, ಅಕ್ರಮ ವಲಸೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಇನ್ನು ಏಪ್ರಿಲ್ 29ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಒಟ್ಟು 294 ಕ್ಷೇತ್ರಗಳಲ್ಲಿ ಬಿಜೆಪಿ 170 ಸ್ಥಾನಗಳ ಗುರಿ ಹೊಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !