ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನ ಪರಿಷತ್ ಕಲಾಪ ಪ್ರಾರಂಭವಾಗುತ್ತಲೇ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.
ಸಂವಿಧಾನದಲ್ಲಿ ಧರ್ಮ ಆಧಾರಿತ ಗುತ್ತಿಗೆಗೆ ಅವಕಾಶ ಇಲ್ಲ. ಸರ್ಕಾರ ಗುತ್ತಿಗೆಯಲ್ಲಿ ಮೀಸಲಾತಿ ಕೊಡಲು ಮುಂದಾಗಿದೆ. ಗುತ್ತಿಗೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಛಲವಾದಿ ನಾರಾಯಣಸ್ವಾಮಿ ಮಾತಿಗೆ ಕಾಂಗ್ರೆಸ್ ಸದಸ್ಯ ಹರಿಪ್ರಸಾದ್ ವಿರೋಧ ವ್ಯಕ್ತಪಡಿಸಿದರು. ಸಂವಿಧಾನದಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿಗೆ ಹಕ್ಕು ಇದೆ. ಜನರು ತೆರಿಗೆ ಕಟ್ಟುವ ಹಣಕ್ಕೆ ದೇಶದ 140 ಕೋಟಿ ಜನರ ಪ್ರತಿಯೊಬ್ಬರಿಗೂ ಹಕ್ಕು ಇದೆ. ಯಾರ ಮೇಲೂ ದ್ವೇಷದ ಭಾವನೆಯಲ್ಲಿ ಮಾತಾಡೋದು ಸರಿಯಲ್ಲ ಎಂದು ತಿರುಗೇಟು ನೀಡಿದ್ದಾರೆ.