ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಕದನಕ್ಕೆ ವೇದಿಕೆ ಸಜ್ಜಾಗಿದೆ. ಬಿಜೆಪಿ-ಕಾಂಗ್ರೆಸ್ 2 ಪಕ್ಷಗಳು ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿವೆ. ಹೀಗಾಗಿ ಅಭ್ಯರ್ಥಿಗಳನ್ನು ಅಳೆದು ತೂಗಿ ಅಖಾಡಕ್ಕೆ ಇಳಿಸಲು ದೆಹಲಿಯಲ್ಲಿ ತೀವ್ರ ಕಸರತ್ತು ನಡೆಯುತ್ತಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಹೀಗಾಗಿ ಈ ಬಾರಿ 20 ಸ್ಥಾನ ಗೆಲ್ಲಲೇಬೇಕೆಂದು ಪಣತೊಟ್ಟಿದೆ. ಈಗಾಗಲೇ ಏಳು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿರುವ ಕಾಂಗ್ರೆಸ್ ಸಮಿತಿ, ಉಳಿದ ಕ್ಷೇತ್ರಗಳ ಪಟ್ಟಿಯನ್ನು ಅಂತಿಮಗೊಳಿಸಲು ಸಿದ್ಧವಾಗಿದೆ. ಈ ಸಂಬಂಧ ದೆಹಲಿಯಲ್ಲಿ ಸಭೆ ನಡೆಯಲಿದ್ದು, ಇಂದು ಎರಡನೇ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇದೆ.
ದೆಹಲಿಯಲ್ಲಿ ಬಿಗುವಿನ ಸಭೆ ನಡೆಯಲಿದ್ದು, ಬಿಜೆಪಿ ಚುನಾವಣಾ ಸಮಿತಿ ಸಭೆಯ ನಂತರ ಪಕ್ಷದ ಅಭ್ಯರ್ಥಿಗಳ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಪ್ರಧಾನಿ ಮೋದಿ ಉಪಸ್ಥಿತಿಯಲ್ಲಿ ಸಭೆ ನಡೆಯಲಿದ್ದು. ರಾಜ್ಯದ 28 ಕ್ಷೇತ್ರಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಲಿದೆ, ಒಂದು ಹಂತದಲ್ಲಿ ಇಂದು ಎರಡನೇ ಪಟ್ಟಿ ಘೋಷಣೆಯಾಗುವ ಸಾಧ್ಯತೆ ಇದೆ.