ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಅಶೋಕ್ ನೇತೃತ್ವದಲ್ಲಿ ಬಿಜೆಪಿ ಬೆಂಗಳೂರು ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಜನಪ್ರತಿನಿಧಿಗಳು ಒಳಗೊಂಡ ಬಿಜೆಪಿ ನಿಯೋಗ ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಬೆಂಗಳೂರು ಅಭಿವೃದ್ಧಿಗೆ 6-8 ಸಾವಿರ ಕೋಟಿ ಅನುದಾನವನ್ನು ಈ ಬಜೆಟ್‌ನಲ್ಲಿ ಘೋಷಣೆ ಮಾಡಬೇಕು. ಬಿಜೆಪಿ ಶಾಸಕರಿಗೆ ಯಾವುದೇ ತಾರತಮ್ಯ ಮಾಡದೇ ಅನುದಾನ ಬಿಡುಗಡೆ ಮಾಡಬೇಕು. ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಸಬೇಕು ಎಂದು ಸಿಎಂಗೆ ಬಿಜೆಪಿ ನಿಯೋಗ ಮನವಿ ಮಾಡಿದೆ.