ಸುಹಾಸ್ ಶೆಟ್ಟಿ ಹತ್ಯೆ ಕೇಸ್ NIA ಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರಿನ ಬಜ್ಪೆಯ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ (NIA) ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.

ಬಿಜೆಪಿಯ (BJP) ಪ್ರಮುಖರೊಂದಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ, ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಸುಹಾಸ್ ಶೆಟ್ಟಿ ಕೊಲೆಯ ಬಗ್ಗೆ ವಿವರಣೆ ನೀಡಿ, ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಪಾರಿ ನೀಡಿರುವ ಪ್ರಕರಣ. ಕೊಲೆಯಾಗಿದ್ದ ಮುಸ್ಲಿಂ ಹುಡುಗನ ಕುಟುಂಬಕ್ಕೆ ಕಾಂಗ್ರೆಸ್ 25 ಲಕ್ಷ ರೂ. ಪರಿಹಾರ ನೀಡಿದ್ದು, ಆ ಹಣವನ್ನು ಬಳಸಿಯೇ ಸುಪಾರಿ ನೀಡಲಾಗಿದೆ. ಸ್ಪೀಕರ್ ಯು.ಟಿ.ಖಾದರ್ ಅವರು, ಆ ಕುಟುಂಬದವರು ಒಳ್ಳೆಯವರು ಎಂದು ಹೇಳಿದ್ದಾರೆ. ಆ ಮನೆಯವರೇ ಸುಪಾರಿ ನೀಡಿದ್ದಾರೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ. ಸ್ಪೀಕರ್ ಆಗಿ ಕೊಲೆ ಪ್ರಕರಣದ ಬಗ್ಗೆ ಮಾತನಾಡುವ ಅಗತ್ಯವೇನಿದೆ? ಯಾವುದೇ ಸ್ಪೀಕರ್ ಕೊಲೆ ಬಗ್ಗೆ ಮಾತನಾಡಿದ ಇತಿಹಾಸವೇ ಇಲ್ಲ ಎಂದರು.

ಪಾಕಿಸ್ತಾನ ಜಿಂದಾಬಾದ್ ಘೋಷಣೆಗೆ, ಭಯೋತ್ಪಾದನೆ ಚಟುವಟಿಕೆಗೆ ಪ್ರೇರಣೆ ಕೊಡುವವರ ಸಂಪರ್ಕ ಇವರಿಗಿದೆ. ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ. ಪಾಕಿಸ್ತಾನ ಜಿಂದಾಬಾದ್ ಎಂದು ಹೇಳುವವರಿಗೆ ಆಪರೇಶನ್ ಸಿಂಧೂರದoತೆಯೇ ಶಾಸ್ತಿ ಆಗಬೇಕಿದೆ. ಇದಕ್ಕೆ ಅಂತ್ಯ ಕಾಣಿಸಬೇಕಿದೆ. ಇದಕ್ಕಾಗಿ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು ಎಂದು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ತಿಳಿಸಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!