ಮೆಟ್ರೋ ದರ ಕಡಿಮೆ ಮಾಡುವಂತೆ ಬಿಜೆಪಿ ನಿಯೋಗ ಮನವಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಿಎಂಆರ್​​ಸಿಎಲ್​ (BMRCL) ಮೆಟ್ರೋ ದರ ಏರಿಕೆ ಮಾಡಿದೆ. ಆ ಮೂಲಕ ಪ್ರಯಾಣಿಕರಿಗೆ ಶಾಕ್ ಮೇಲೆ ಶಾಕ್ ನೀಡಲಾಗಿದೆ. ಇದರಿಂದಾಗಿ ಪ್ರಯಾಣಿಕರು ಕೆಂಡಾಮಂಡಲರಾಗಿದ್ದಾರೆ. ಈ ಮಧ್ಯೆ ಬಿಜೆಪಿ ನಿಯೋಗ ನಮ್ಮ ಮೆಟ್ರೋ ಪ್ರಧಾನ ಕಚೇರಿಗೆ ಭೇಟಿ ನೀಡಿ ದರ ಇಳಿಸುವಂತೆ ಮನವಿಪತ್ರ ಸಲ್ಲಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ಶಾಸಕರಾದ ಸಿ.ಕೆ.ರಾಮಮೂರ್ತಿ, ರವಿಸುಬ್ರಹ್ಮಣ್ಯ, ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎಸ್.ಹರೀಶ್​ ಮತ್ತು ಮಾಜಿ ಮೇಯರ್ ಗೌತಮ್ ಕುಮಾರ್​ ಮತ್ತಿತರರಿಂದ ಬಿಎಂಆರ್​ಸಿಎಲ್ ಎಂಡಿಗೆ ಮನವಿ ಸಲ್ಲಿಸಲಾಗಿದೆ.

ಮನವಿಪತ್ರ ಸಲ್ಲಿಕೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಸಿ.ಕೆ. ರಾಮಮೂರ್ತಿ, ಬಿಜೆಪಿ ನಿಯೋಗದಿಂದ ಮೆಟ್ರೋ ಟಿಕೆಟ್ ದರ ವಾಪಸ್ ಪಡೆಯುವಂತೆ ಮನವಿ ಮಾಡಿದ್ದೇವೆ. ಮೆಟ್ರೋ ಎಂಡಿ ಜೊತೆ ಮಾತಾಡಿ ಪ್ರಯಾಣಿಕರ ಮೇಲೆ ಹೊರೆ ಆಗುವ ಬಗ್ಗೆ ವಿವರಿಸಿದ್ದೇವೆ. ಬೇರೆ ಬೇರೆ ನಗರಗಳಲ್ಲಿ ಮೆಟ್ರೋ ಟಿಕೆಟ್ ದರ ಕಡಿಮೆ ಇದೆ ಅಂತ ಗಮನಕ್ಕೆ ತಂದಿದ್ದೇವೆ ಎಂದರು.

ಸರ್ಕಾರ ಶಾಸಕರ ಜೊತೆ ಕುಳಿತು ಚರ್ಚೆ ಮಾಡಬೇಕಿತ್ತು. ಯಾವುದೋ ಕಮಿಟಿ ವರದಿ ಪಡೆದು ದರ ಏರಿಕೆ ಮಾಡಿದ್ದಾರೆ. ದರ ಏರಿಕೆ ಕಡಿಮೆ ಮಾಡಿದಿದ್ದರೆ ಹೋರಾಟ ಮಾಡುವುದಾಗಿ ಹೇಳಿದ್ದೇವೆ. ಜನಕ್ಕೆ ಹೆಚ್ಚು ಹೊರೆಯಾಗದಂತೆ ಏರಿಸಲಿ ಅಂತ ಹೇಳಿದ್ದೇವೆ ಎಂದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!