ರೇಣುಕಾಸ್ವಾಮಿ ನಿವಾಸಕ್ಕೆ ಬಿಜೆಪಿ ನಿಯೋಗ ಭೇಟಿ: 2 ಲಕ್ಷ ರೂ. ನೆರವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದರ್ಶನ್‌ರಿಂದ ಕೊಲೆಯಾಗಿದ್ದಾರೆ ಎನ್ನಲಾದ ಚಿತ್ರದುರ್ಗದ ರೇಣುಕಾಸ್ವಾಮಿ ಮನೆಗೆ ಬಿಜೆಪಿ ನಿಯೋಗ ಭೇಟಿ ನೀಡಿದೆ.

ಚಿತ್ರದುರ್ಗದ ವಿಆರ್‌ಎಸ್‌ ಬಡಾವಣೆಯ ರೇಣುಕಾಸ್ವಾಮಿ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದ ಬಿಜೆಪಿ ನಿಯೋಗ ಮಂಗಳವಾರ ಭೇಟಿ ನೀಡಿದ್ದು, ಪಕ್ಷದ ವತಿಯಿಂದ ರೂ.2 ಲಕ್ಷ ನೆರವು ನೀಡಿ, ಮೃತ ವ್ಯಕ್ತಿಯ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದೆ.

ರೇಣುಕಾಸ್ವಾಮಿ ಅವರ ಹತ್ಯೆ ಅಮಾನವೀಯವಾಗಿದ್ದು, ಸುಸಂಸ್ಕೃತ ಸಮಾಜದಲ್ಲಿ ಯಾರೂ ಇದನ್ನು ಬೆಂಬಲಿಸಲು ಸಾಧ್ಯವಿಲ್ಲ, ಈ ಘಟನೆಯನ್ನು ಪ್ರತಿಯೊಬ್ಬರೂ ತೀವ್ರವಾಗಿ ಖಂಡಿಸಬೇಕು. ಈ ಹೇಯ ಹತ್ಯೆ ರಾಜ್ಯ ಮಾತ್ರವಲ್ಲದೆ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಮೃತರ ಪೋಷಕರು ಮತ್ತು ಹೆಂಡತಿಯನ್ನು ನೋಡಿದರೆ ನೋವಾಗುತ್ತದೆ. ಅವರಿಗೆ ಹೇಗೆ ಸಾಂತ್ವನ ಹೇಳುವುದು ಮತ್ತು ಅವರಲ್ಲಿ ಧೈರ್ಯ ತುಂಬುವುದು ಹೇಗೆ ಎಂದು ನಮಗೆ ಅರ್ಥವಾಗುತ್ತಿಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!