ಶಿವಮೊಗ್ಗಕ್ಕೆ ನಾಳೆ ಬಿಜೆಪಿ ನಿಯೋಗ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶಿವಮೊಗ್ಗದಲ್ಲಿನ ಗಲಭೆ ಪ್ರಕರಣದ ಹಿನ್ನೆಲೆ ಶಿವಮೊಗ್ಗ ನಗರಕ್ಕೆ ನಾಳೆ ಬಿಜೆಪಿ ನಿಯೋಗ ಭೇಟಿ ನೀಡಲಿದೆ.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಾಳೆ ಬೆಳಗ್ಗೆ 10.30ಕ್ಕೆ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡುವ ನಿಯೋಗ,ಗಾಯಗೊಂಡವರ ಆರೋಗ್ಯ ವಿಚಾರಿಸಲಿದೆ.

ನಂತರ 11.15ಕ್ಕೆ ರಾಗಿಗುಡ್ಡಕ್ಕೆ ಬಿಜೆಪಿ ನಾಯಕರ ತಂಡ ಭೇಟಿ ನೀಡಿ ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದೆ .

ಶಿವಮೊಗ್ಗದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಜನರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಘಟನೆಯಲ್ಲಿ ಪೊಲೀಸರು ಸೇರಿದಂತೆ 7 ಜನರು ಗಾಯಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!