ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ನಜೀರ್ ಅಹ್ಮದ್ ಅಮಾನತಿಗೆ ಬಿಜೆಪಿ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಧಾನ ಪರಿಷತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಎಂಎಲ್‌ಸಿ ನಜೀರ್ ಅಹ್ಮದ್ ಅವರನ್ನು ತಕ್ಷಣ ಅಮಾನತುಗೊಳಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ. ನಜೀರ್ ಅಹ್ಮದ್ ಅವರು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯೂ ಆಗಿದ್ದು, ಸದನದ ಘನತೆಗೆ ಧಕ್ಕೆಯುಂಟು ಮಾಡುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇದನ್ನೂ ಓದಿ: ಈ ಸಂಬಂಧ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ಬಿಜೆಪಿ ನಿಯೋಗ ಪರಿಷತ್ತಿನ ಅಧ್ಯಕ್ಷ ಬಸವರಾಜ ಹೊರಟ್ಟಿ … Continue reading ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ನಜೀರ್ ಅಹ್ಮದ್ ಅಮಾನತಿಗೆ ಬಿಜೆಪಿ ಆಗ್ರಹ