ಹೊಸದಿಗಂತ ವರದಿ ಕೊಪ್ಪಳ:
ರಾಜ್ಯ ಬಿಜೆಪಿಯ ಡಿಜಿಟಲ್ ಮಾಧ್ಯಮ ಪ್ರಕೋಷ್ಠದಿಂದ ಗಂಗಾವತಿ ತಾಲೂಕಿನ ಮರಳಿ ಗ್ರಾಮದ ರಾಯಲ್ ರಿಚ್ ಕೌಂಟಿಯಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಗೆ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನ ನಡೆಯಲಿದೆ.
ಕಾರ್ಯಕ್ರಮದ ಮುಖ್ಯ ವಕ್ತಾರರಾಗಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭಾಗವಹಿಸಲಿದ್ದಾರೆ. ಡಿಜಿಟಲ್ ಮಾಧ್ಯಮ ಪ್ರಕೋಷ್ಠ ದ ಕಾರ್ಯಕರ್ತರು ಇರಲಿದ್ದಾರೆ.