ಸಿದ್ದು ಪರ ಪ್ರಚಾರಕ್ಕೆ ಬಿಜೆಪಿ ಅಸಮಾಧಾನ: ಶಿವರಾಜ್ ಕುಮಾರ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಾಜಿ ಸಿಎಂ ಸಿದ್ದರಾಮಯ್ಯ ಪರ ವರುಣಾದಲ್ಲಿ ನಟ ಶಿವರಾಜ್ ಕುಮಾರ್ ಪ್ರಚಾರ ಮಾಡಿದ್ದಕ್ಕೆ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಹಾಗೂ ಸಂಸದ ಪ್ರತಾಪ್ ಸಿಂಹ ಅಸಮಾಧಾನ ವ್ಯಕ್ತಪಡಿಸಿದ್ದು, ಈ ವಿಚಾರವಾಗಿ ಸ್ವತಃ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್ ಕುಮಾರ್, ಸಚಿವ ವಿ. ಸೋಮಣ್ಣ ಹಾಗೂ ಪ್ರತಾಪ್ ಸಿಂಹ ಇಬ್ಬರೂ ನನಗೆ ಒಳ್ಳೆಯ ಆಪ್ತರು. ಅವರ ಬಗ್ಗೆ ನನಗೆ ಗೌರವವಿದೆ. ಸೋಮಣ್ಣ ವರುಣಾದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ನನಗೆ ಗೊತ್ತಿರಲಿಲ್ಲ. ಸಿದ್ದರಾಮಯ್ಯ ಎದುರಾಳಿ ಯಾರು ಎಂಬುದನ್ನೇ ನಾನು ಈವರೆಗೆ ಕೇಳಿಲ್ಲ ಎಂದಿದ್ದಾರೆ.

ನಾನು ಸೋಮಣ್ಣ ಕರೆದರೆ ಅವರ ಪರವೂ ಪ್ರಚಾರ ಮಾಡುತ್ತೇನೆ. ಬಿಜೆಪಿ ನಾಯಕರಾರೂ ನನ್ನನ್ನು ಸಂಪರ್ಕಿಸಿಲ್ಲ. ಚುನಾವಣಾ ಪ್ರಚಾರಕ್ಕೆ ಬರುವಂತೆ ಆಹ್ವಾನಿಸಿಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!