Thursday, July 7, 2022

Latest Posts

ಬಿಜೆಪಿ ಜಿಲ್ಲಾ ಭವನದ ಕಟ್ಟಡ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ, ಹಾವೇರಿ:

ಬಿಜೆಪಿ ಜಿಲ್ಲಾ ಭವನದ ಕಟ್ಟಡ ಕಾಮಗಾರಿಯನ್ನು ಆದಷ್ಟು ಶೀಘ್ರವಾಗಿ ಮುಕ್ತಾಯ ಗೊಳಿಸಬೇಕು ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು.
ಸೋಮವಾರ ಬಿಜೆಪಿ ಜಿಲ್ಲಾ ಭವನದ ಕಟ್ಟಡ ಕಾಮಗಾರಿಯ ಪ್ರಗತಿಯನ್ನು ವಿಕ್ಷಿಸಿದ ಸಂದರ್ಭದಲ್ಲಿ ಅವರು ಗುತ್ತಿಗೆದಾರರೊಂದಿಗೆ ಮಾತನಾಡಿದರು. ಕಟ್ಟಡ ಕಾಮಗಾರಿಗೆ ಅತ್ಯುನ್ನತ ಗುಣಮಟ್ಟದ ಸಾಮಗ್ರಿಗಳನ್ನು ಬಳಸಬೇಕು ಎಂದು ತಿಳಿಸಿದರು.
ನಂತರ ಪ್ರವಾಸ ಮಂದಿರದಲ್ಲಿ ಜರುಗಿದ ಸಭೆಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಬಿಜೆಪಿ ಜಿಲ್ಲಾ ಭವನದ ಕಾಮಗಾರಿ ಅತ್ಯಂತ ವೇಗವಾಗಿ ನಡೆದಿದೆ ಹಾಗೂ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಂದು ಲೋಕಾರ್ಪಣೆಗೊಳ್ಳಲಿದೆ ಎಂದರು.
ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ ಕಟ್ಟದ ನೀಲ ನಕ್ಷೆಯನ್ನು ಮೊತ್ತೊಮ್ಮೆ ಚೆರ್ಚಿಸಿದರು ಹಾಗೂ ಸಭೆಯಲ್ಲಿ ಉಪಸ್ಥಿತರಿದ್ದವರ ಸಲಹೆ ಸೂಚನೆಗಳನ್ನು ಪರಿಗಣಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ನೆಹರು ಓಲೇಕಾರ, ವಿರುಪಾಕ್ಷ ಬಳ್ಳಾರಿ, ಅರುಣಕುಮಾರ ಗುತ್ತೂರ, ರಾಜ್ಯ ಕಟ್ಟಡ ಸಮಿತಿ ಸದಸ್ಯ ಶರತ್ ಹೊಂಬಾಳೆ, ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಶಿವರಾಜ ಸಜ್ಜನರ, ಡಾ. ಸಂತೋಷ ಆಲದಕಟ್ಟಿ, ರಮೇಶ ಪಾಲನಕರ, ನಂಜುಂಡೇಶ ಕಳ್ಳೇರ, ರಮೇಶ ಬಳ್ಳಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಮುಳ್ಳೂರ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss