Thursday, July 7, 2022

Latest Posts

 ಹಣ ಹಂಚಿ ಗೆಲ್ಲುವ ಸಂಸ್ಕೃತಿ ಬಿಜೆಪಿಗೆ ಇಲ್ಲ, ಜನರ ವಿಶ್ವಾಸದಿಂದ ಬಿಜೆಪಿ ಗೆಲ್ಲುತ್ತದೆ: ಬಿ.ವೈ.ವಿಜಯೇಂದ್ರ

ದಿಗಂತ ವರದಿ ಕೊಪ್ಪಳ:

ಹಣ ಹಂಚಿ ಗೆಲ್ಲುವ ಸಂಸ್ಕೃತಿ ಭಾರತೀಯ ಜನತಾ ಪಕ್ಷದವರಿಗೆ ಇಲ್ಲಾ ಎಂದು  ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಜಿಲ್ಲೆಯ ಕುಷ್ಡಗಿ ತಾಲೂಕಿನ ತಾವರಗೇರಾ  ಪಟ್ಟಣದ ಖಾಸಗಿ ಹೋಟಲ್ ಒಂದರಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೇಸ್ ಅಭ್ಯರ್ಥಿ ಸೋಲುವ ಭಿತಿಯಿಂದ ಹತಾಶೆಯಿಂದ ಸುಳ್ಳು ಆರೋಪವನ್ನು ಮಾಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರ ಮೇಲೆ ಗಲಾಟೆ ಮಾಡಿಸುವ ಮೂಲಕ ಗುಂಡಾ ವರ್ತನೆ ತೋರಿಸುತ್ತಿದ್ದಾರೆ. ಇದು ಅವರ ಸಂಸ್ಕೃತಿ ಎತ್ತಿ ತೋರಿಸುತ್ತಿದೆ ಎಂದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವರಿಗೆ ಉತ್ತರ ಕರ್ನಾಟಕ ಜನತೆ ತುಂಬಾ ಅಭಿಮಾನ ಇಟ್ಟುಕೊಂಡಿದ್ದಾರೆ. ಅದರಂತೆ ಬಿಎಸ್ ಯಡಿಯೂರಪ್ಪ ನವರು ಸಹ ಉತ್ತರ ಕರ್ನಾಟಕದ ಜನತೆಯ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದ್ದಾರೆ.

ಮಸ್ಕಿ ವಿಧಾನಸಭಾ ಕೇತ್ರದಲ್ಲಿ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡರ ಗೆಲುವಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ.
ಮಸ್ಕಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಹಿತದೃಷ್ಟಿಯಿಂದ ಮತದಾರರು ಬಿಜೆಪಿ ಪಕ್ಷವನ್ನು ಬೆಂಬಲಿಸಲಿದ್ದು. ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಜಯಗಳಿಸಲಿದ್ದಾರೆ ಎಂದು ಹೇಳಿದರು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಸಂಸದ ಸಂಗಣ್ಣ ಕರಡಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ದೊಡ್ಡನಗೌಡ ಹೆಚ್. ಪಾಟೀಲ್, ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಸಿ. ವಿ. ಚಂದ್ರಶೇಖರ, ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಕುರಿ ಮತ್ತು ಉಣ್ಣೆ ನಿಗಮದ ಅಧ್ಯಕ್ಷ ಶರಣು ತಳ್ಳಿಕೇರಿ, ಜಿಲ್ಲಾ ಪಂಚಾಯಿತಿ ಸದಸ್ಯ ಕೆ. ಮಹೇಶ ಸೇರಿದಂತೆ ಇನ್ನಿತರ ಗಣ್ಯರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss