ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ನಮ್ಮ ಮೆಟ್ರೋ ಪ್ರಯಾಣ ದರವನ್ನು ಜಾರಿಗೆ ಬರುವಂತೆ ಬಿಎಂ ಆರ್ ಸಿ ಎಲ್ ಹೆಚ್ಚಳ ಮಾಡಲಾಗಿತ್ತು. ಶೇ.47ರಷ್ಟು ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿದ್ದರ ವಿರುದ್ಧ ಬಿಜೆಪಿ ಸಿಡಿದೆದ್ದಿದೆ. ಬೆಂಗಳೂರಿನ ವಿವಿಧ ಮೆಟ್ರೋ ನಿಲ್ದಾಣಗಳ ಎದುರು ಪ್ರತಿಭಟನೆ ನಡೆಸುತ್ತಿದೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಶಾಸಕ ಗೋಪಾಲಯ್ಯ ನೇತೃತ್ವದಲ್ಲಿ ಮೆಟ್ರೋ ದರ ಹೆಚ್ಚಳ ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಜಯನಗರದ ಮೆಟ್ರೋ ಶಾಸಕ ಸಿಕೆ ರಾಮಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.