ಶಿವಮೊಗ್ಗಕ್ಕೆ ಇಂದು ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ, ರಾಗಿಗುಡ್ಡ ಪ್ರದೇಶದಲ್ಲಿರುವ ಹಿಂದೂಗಳು ಮನೆಯಲ್ಲಿ ವಾಸಮಾಡಲು ಭಯವಾಗುತ್ತಿದೆ ಎನ್ನುವ ಪರಿಸ್ಥಿತಿ ಬಂದಿದೆ. ಇದೀಗ ಬಿಜೆಪಿ ಸತ್ಯಶೋಧನಾ ಸಮಿತಿ ಇಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದೆ.

ಇಂದು ಬೆಳಗ್ಗೆ 11 ಗಂಟೆಗೆ ಮಗ್ಗಾನ್ ಆಸ್ಪತ್ರೆಗೆ ತಂಡ ಭೇಟಿ ನೀಡಲಿದ್ದು, ಗಾಯಗೊಂಡವರ ಆರೋಗ್ಯ ವಿಚಾರಿಸಲಿದೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ನೇತೃತ್ವದ ತಂಡ ಗಲಭೆ ನಡೆದ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

ಸಂತ್ರಸ್ತರ ಸಮಸ್ಯೆ ಆಲಿಸಿ ನಂತರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಕೆ.ಎಸ್. ಈಶ್ವರಪ್ಪ, ಡಾ ಸಿ.ಎನ್. ಅಶ್ವತ್ಥ ನಾರಾಯಣ್, ಮಾಜಿ ಸಚಿವ ಅರಗ ಜ್ಞಾನೇಂದ್ರ, ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಪರಿಷತ್ ಸದಸ್ಯರಾದ ರವಿಕುಮಾರ್, ಎಸ್. ರುದ್ರೇಗೌಡ, ಶಾಸಕ ಚನ್ನಬಸಪ್ಪ, ಡಿ.ಎಸ್. ಅರುಣ್, ಭಾರತಿ ಶೆಟ್ಟಿ ಸೇರಿ ಇನ್ನಿತರರು ಇರಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!