ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದಲ್ಲಿ ಸಾರ್ವಜನಿಕ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಮತ್ತು ವೈಯಕ್ತಿಕ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಬಿಹಾರ ಘಟಕವು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಇಂದು ದೂರು ದಾಖಲಿಸಿದೆ.
ಬಿಜೆಪಿ ತನ್ನ ದೂರಿನಲ್ಲಿ ರಾಹುಲ್ ಗಾಂಧಿ ಮಾದರಿ ನೀತಿ ಸಂಹಿತೆ ಮತ್ತು 1951ರ ಜನಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದೆ.
ರಾಹುಲ್ ಗಾಂಧಿಗೆ ಶೋ-ಕಾಸ್ ನೋಟಿಸ್ ಜಾರಿ ಮಾಡಬೇಕು, ಬೇಷರತ್ತಾದ ಸಾರ್ವಜನಿಕ ಕ್ಷಮೆಯಾಚಿಸುವಂತೆ ನಿರ್ದೇಶಿಸಬೇಕು ಮತ್ತು ಪ್ರಜಾಪ್ರಭುತ್ವ ಹಾಗೂ ಚುನಾವಣಾ ಮಾನದಂಡಗಳ ಪಾವಿತ್ರ್ಯವನ್ನು ಎತ್ತಿಹಿಡಿಯಲು ನಿರ್ದಿಷ್ಟ ಅವಧಿಗೆ ಪ್ರಚಾರ ಮಾಡದಂತೆ ನಿರ್ಬಂಧಿಸಬೇಕು ಎಂದು ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

