ರಾತ್ರಿಯೊಳಗೆ ಬಿಜೆಪಿ ಮೊದಲ ಹಂತದ ಪಟ್ಟಿ ರಿಲೀಸ್: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ವಿಧಾನಸಭಾ ಚುನಾವಣೆಯ ಬಿಜೆಪಿ ಮೊದಲ ಹಂತದ ಪಟ್ಟಿ ಸಿದ್ಧವಾಗಿದ್ದು, 170ಕ್ಕೂ ಅಧಿಕ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯಲ್ಲಿ ರಾತ್ರಿಯೊಳಗೆ ಬಿಡುಗಡೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ಕುರಿತು ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಕುರಿತಂತೆ ಹಲವು ಸುತ್ತಿನ ಮಾತುಕತೆ ನಂತರ ಅಂತಿಮವಾಗಿ ಎಲ್ಲವೂ ನಿರ್ಣಯ ಆಗಿದೆ. ಗೃಹ ಸಚಿವ ಅಮಿತ್‌ ಶಾ ಅವರು ಸಂಜೆ ದೆಹಲಿಗೆ ಬಂದ ನಂತರ ಅವರೊಂದಿಗೆ ಮಾತುಕತೆ ನಡೆಸಿ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ. ಮೊದಲ ಹಂತದಲ್ಲಿ ದೊಡ್ಡ ಪಟ್ಟಿಯನ್ನು ಹಾಗೂ ಎರಡನೇ ಹಂತದಲ್ಲಿ ಉಳಿದ ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!