ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಧ್ವಜಗಳು: ಮೌನಕ್ಕೆ ಜಾರಿದ ಕೈ ಕಾರ್ಯಕರ್ತರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಉತ್ತರ ಪ್ರದೇಶದ ರಾಜಧಾನಿ ಲಖನೌದಲ್ಲಿರುವ ರಾಜ್ಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಧ್ವಜಗಳು ಪತ್ತೆಯಾಗಿದ್ದು, ಇದರ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇತ್ತ ಫೋಟೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಕಾಂಗ್ರೆಸ್​ ಕಾರ್ಯಕರ್ತರು ತೀವ್ರ ಅಸಮಾಧಾನಕ್ಕೆ ಒಳಗಾಗಿರುವ ಹಾಗೂ ಅಚ್ಚರಿಯಿಂದ ನೋಡುತ್ತಿರುವ ಘಟನೆ ನಡೆದಿದೆ.

ಕಾಂಗ್ರೆಸ್​ ಕಾರ್ಯಕರ್ತರು ತಮ್ಮ ಕಚೇರಿಯನ್ನು ಒಳಹೊಕ್ಕಾಗಿ ಒಂದು ಕಡೆಗಳಲ್ಲಿ ಅನೇಕ ಬಿಜೆಪಿ ಧ್ವಜಗಳು ಇರುವುದನ್ನು ನೋಡಿ ಕಂಗಾಲಾಗಿದ್ದಾರೆ.
ಇತ್ತ, ಕಾಂಗ್ರೆಸ್ ಕಚೇರಿ ಪದಾಧಿಕಾರಿಗಳು ಈ ಬಗ್ಗೆ ಯಾವುದೇ ಸೂಕ್ತವಾದ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಈ ಧ್ವಜಗಳು ಕಚೇರಿಯ ಒಳಗೆ ಹೇಗೆ ಬಂತು ಎಂದು ಕೇಳಿದ ಪ್ರಶ್ನೆಗಳಿಗೆ ಕಾಂಗ್ರೆಸ್​ ಕಾರ್ಯಕರ್ತರ ಮೌನವೇ ಉತ್ತರವಾಗಿದೆ. ಆದರೆ, ಯುವ ಮುಖಂಡರೊಬ್ಬರು ಈ ಕುರಿತು ಮಾತನಾಡಿ, ಘಟನೆಯ ಕುರಿತು ತನಿಖೆ ನಡೆಸುತ್ತಿದ್ದೇವೆ. ಇದು ಕೆಲ ಅಪರಿಚಿತರ ಕಿಡಿಗೇಡಿತನ ಇರಬೇಕೆಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!