ಹೊಸದಿಗಂತ ವರದಿ ಬಾಗಲಕೋಟೆ:
ಇಂದು ಬಿಜೆಪಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಅವರ ಮನೆ ಮುಂದೆ ಕಮಲದ ರಂಗೋಲಿ ಬಿಡಿಸಿ ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಧ್ವಜಾರೋಹಣ ಮಾಡಿ ಬಿಜೆಪಿ ಕಾರ್ಯಕರ್ತರಿಗೆ ವಿಜಯ ಸಂಕಲ್ಪವಾದ ಕಂಕಣವನ್ನು ಶಾಸಕರು ಕಟ್ಟಿದರು. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೇಲ್ಲಿಸುವ ಸಂಕಲ್ಪ ಮಾಡಿದರು.
ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ, ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ ಮಹಾನ್ ನಾಯಕರ ತ್ಯಾಗ, ಸಂಘಟನೆ ಸ್ಮರಿಸಿದರು. ಸಹಸ್ರಾರು ತ್ಯಾಗ, ಬಲಿದಾನಗಳ ಪ್ರತಿಕವಾಗಿ ಸೈದ್ದಾಂತಿಕ ಹೋರಾಟದ ಪ್ರತಿಫಲವೇ ಬಿಜೆಪಿ ಪಕ್ಷವಾಗಿದ್ದು ಈ ದಿನವನ್ನು ಸಂಭ್ರಮದಿಂದ ಆಚರಿಸೋಣ. ವಿಜಯದ ಸಂಕಲ್ಪ ಮಾಡೋಣ ,
ಅಟಲ್ ಬಿಹಾರಿ ವಾಜಪೇಯಿ ಅವರ ಕನಸನ್ನು ಪ್ರಧಾನಿ ನರೇಂದ್ರ ಮೋದಿಯವರು ನನಸು ಮಾಡುತ್ತಿದ್ದಾರೆ. ಅವರ ನೇತೃತ್ವದಲ್ಲಿ ಭಾರತ ವಿಶ್ವಗುರುವಾಗುವತ್ತ ಹೆಜ್ಜೆಯನ್ನು ಹಾಕುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.