ಬ್ರಿಜ್ ಭೂಷಣ್ ಶರಣ್ ಸಿಂಗ್ ಬದಲು ಮಗನಿಗೆ ಟಿಕೆಟ್ ನೀಡಿದ ಬಿಜೆಪಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಉತ್ತರಪ್ರದೇಶದ ಕೈಸರ್‌ಗಂಜ್‌ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಬ್ರಿಜ್​ ಭೂಷಣ್​ ಶರಣ್​ಸಿಂಗ್ ಪರವಾಗಿ ಅವರ ಮಗ ಕರಣ್ ಭೂಷಣ್ ಸಿಂಗ್ ಅವರಿಗೆ ಬಿಜೆಪಿ ಟಿಕೆಟ್​​​ ನೀಡಿದೆ.

ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್​ ಭೂಷಣ್​ ಶರಣ್​ಸಿಂಗ್​​​ಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್​ ಇಲ್ಲ ಎಂದು ಹೇಳಲಾಗಿತ್ತು. ಇದೀಗ ಅವರ ಮಗನಿಗೆ ಟಿಕೆಟ್​​​ ನೀಡಲಾಗಿದೆ .

ಕರಣ್ ಭೂಷಣ್ ಸಿಂಗ್ ಪ್ರಸ್ತುತ ಉತ್ತರ ಪ್ರದೇಶದ ಕುಸ್ತಿ ಸಂಘದ ಅಧ್ಯಕ್ಷರಾಗಿದ್ದಾರೆ. ಜತೆಗೆ ಗೊಂಡಾದ ನವಾಬ್‌ಗಂಜ್‌ನಲ್ಲಿರುವ ಸಹಕಾರಿ ಗ್ರಾಮಾಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷರೂ ಆಗಿದ್ದಾರೆ. ತಂದೆಯ ಮೇಲೆ ಆರೋಪ ಇದ್ದರ ಕಾರಣ ಈ ಭಾರೀ ಪಕ್ಷ ಅವರಿಗೆ ಟಿಕೆಟ್​​​ ನೀಡಿಲ್ಲ, ಅವರ ಮಗನಿಗೆ ಲೋಕಸಭೆಯಲ್ಲಿ ಟಿಕೆಟ್​​​ ನೀಡಿದೆ.

ರಾಯ್ ಬರೇಲಿಯಲ್ಲಿ ದಿನೇಶ್ ಪ್ರತಾಪ್ ಸಿಂಗ್ ಸ್ಪರ್ಧೆ:
ಯೋಗಿ ಸರ್ಕಾರದ ಸಚಿವ ದಿನೇಶ್ ಪ್ರತಾಪ್ ಸಿಂಗ್ ಈ ಬಾರಿ ಬಿಜೆಪಿಯಿಂದ ರಾಯ್ ಬರೇಲಿಯಲ್ಲಿ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್​​​ನ ಭದ್ರಕೋಟೆಯಲ್ಲಿ ಈ ಬಾರಿ ಬಿಜೆಪಿ ತನ್ನ ಶಕ್ತಿಪ್ರದರ್ಶನ ಮಾಡಲಿದೆ. 2019ರಲ್ಲಿ ಸೋನಿಯಾ ಗಾಂಧಿಯವರ ಬಿಜೆಪಿ ವಿರುದ್ಧ 1.6 ಲಕ್ಷ ಮತಗಳಲ್ಲಿ ಗೆಲುವು ಸಾಧಿಸಿದ್ದರು. ಮೇ 3 ರಂದು ರಾಯ್‌ಬರೇಲಿಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಇನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಫಿರೋಜ್ ಗಾಂಧಿ 1960 ರಿಂದ ಈ ಕ್ಷೇತ್ರದಿಂದಲ್ಲೇ ಸ್ಪರ್ಧಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!