ಜೆಡಿಎಸ್​ಗೆ 3 ಕ್ಷೇತ್ರ ಬಿಟ್ಟುಕೊಟ್ಟ ಬಿಜೆಪಿ: ಎಚ್​ಡಿ ಕುಮಾರಸ್ವಾಮಿ ನೀಡಿದ್ರು ಮಾಹಿತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್​ ಮತ್ತು ಬಿಜೆಪಿ ನಡುವಿನ ಸೀಟು ಹಂಚಿಕೆ ಫೈನಲ್ (BJP And JDS seat-sharing in Karnataka) ಆಗಿದ್ದು, ಬಿಜೆಪಿ ಹೈಕಮಾಂಡ್, ಜೆಡಿಎಸ್​ಗೆ ಮೂರು ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ.

ಈ ಬಗ್ಗೆ ಸ್ವತಃ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​ಡಿ ಕುಮಾರಸ್ವಾಮಿ(HD Kumaraswamy) ಬಹಿರಂಗಪಡಿಸಿದ್ದು, ಹಾಸನ ಕ್ಷೇತ್ರ ಜೆಡಿಎಸ್ ಪಾಲು ಆಗಿದ್ದು, ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡುವುದು ಖಚಿತ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವುದು ಪಕ್ಷ ಮುಗಿಸಲು ಅಲ್ಲ. ಪಾತಾಳಕ್ಕೆ ಬಿದ್ದಿದ್ದೇವೆ ಮೇಲೆ ಎದ್ದೇಳಬೇಕಲ್ಲ ಎಂದು ಮಾಜಿ ತಿಳಿಸಿದರು.

ಇನ್ನು ಜೆಡಿಎಸ್ ಪಾಲಿಗೆ ಹಾಸನ, ಮಂಡ್ಯ, ಕೋಲಾರ ಕ್ಷೇತ್ರ ಸಿಕ್ಕಿದ್ದು,ನಾನು ಅಷ್ಟಬೇಗ ಸಾಯಲ್ಲ ನಿಮ್ಮ ಜೊತೆ ಇರುತ್ತೇನೆ. ಭಗವಂತ ನನಗೆ ಅಯಸ್ಸು ಕೊಡುತ್ತಾನೆ. ಜೆಡಿಎಸ್​ ಪಕ್ಷ ಉಳಿಸಿ ಎಂದು ಭಾವುಕರಾದ ಕುಮಾರಸ್ವಾಮಿ, ಹಾಸನದಿಂದ ಪ್ರಜ್ವಲ್​ ರೇವಣ್ಣ ಸ್ಪರ್ಧೆ ಮಾಡುತ್ತಾರೆ. ಪ್ರಜ್ವಲ್ ಅಭ್ಯರ್ಥಿ ಅಲ್ಲ ಕುಮಾರಸ್ವಾಮಿ ಅಂದುಕೊಳ್ಳಿ. ಕುಮಾರಸ್ವಾಮಿ ಅಭ್ಯರ್ಥಿ ಎಂದು ತಿಳಿದು ಮತಹಾಕಿ ಎಂದು ಹೇಳಿದರು. ಈ ಮೂಲಕ ಹಾಸನದಿಂದ ಪ್ರಜ್ವಲ್ ರೇವಣ್ಣ​​ ಸ್ಪರ್ಧೆಯನ್ನು ಖಚಿತಪಡಿಸಿದರು.

ಜೆಡಿಎಸ್​ ಕನಿಷ್ಠ ಐದು ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿತ್ತು. ಆದ್ರೆ, ಬಿಜೆಪಿ ಹೈಕಮಾಂಡ್​ ಅಳೆದುತೂಗಿ ಅಂತಿಮವಾಗಿ ಜೆಡಿಎಸ್​ಗೆ ನಿರೀಕ್ಷೆಯಂತೆ ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ. ಹಾಸನದಲ್ಲಿ ಈಗಾಗಲೇ ಜೆಡಿಎಸ್​ನ ಪ್ರಜ್ವಲ್ ರೇವಣ್ಣ ಸಂಸದರಿದ್ದು, ಈ ಬಾರಿ ಅವರು ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಇನ್ನು ಜೆಡಿಎಸ್​ ಭದ್ರಕೋಟೆಯಾಗಿದ್ದ ಮಂಡ್ಯವನ್ನು ಪಡೆದುಕೊಳ್ಳುವಲ್ಲಿ ದಳಪತಿಗಳು ಯಶಸ್ವಿಯಾಗಿದೆ. ಬಿಜೆಪಿ ಹಾಲಿ ಸಂಸದ ಇರುವ ಕೋಲಾರ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಹಾಲಿ ಬಿಜೆಪಿ ಸಂಸದ ಮುನಿಸ್ವಾಮಿಗೆ ಈ ಬಾರಿ ಟಿಕೆಟ್​ ಇಲ್ಲ ಎನ್ನುವುದು ಸ್ಪಷ್ಟವಾಗಿದೆ. ಇನ್ನು ಮಂಡ್ಯ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾ ಅಂಬರೀಶ್​ಗೆ ನಿರಾಸೆಯಾಗಿದ್ದು, ಅವರು ಮುಂದೆ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!