Thursday, October 23, 2025

ಈಶಾನ್ಯ, ಪಶ್ಚಿಮ, ಆಗ್ನೇಯ ಶಿಕ್ಷಕರ, ಪದವೀಧರರ ಕ್ಷೇತ್ರ ಚುನಾವಣೆಗೆ ಬಿಜೆಪಿ ಸಜ್ಜು: ಪಕ್ಷ ಪ್ರಮುಖರ ಪಟ್ಟಿ ಬಿಡುಗಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈಶಾನ್ಯ ಶಿಕ್ಷಕರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ, ಪಶ್ಚಿಮ ಪದವೀಧರರ ಕ್ಷೇತ್ರ ಮತ್ತು ಆಗ್ನೇಯ ಪದವೀಧರರ ಕ್ಷೇತ್ರದಿಂದ ವಿಧಾಪರಿಷತ್‌ ಸದಸ್ಯ ಸ್ಥಾನಕ್ಕೆ ನಡೆಯವ ಚುನಾವಣೆಗೆ ಬಿಜೆಪಿ ಪ್ರಮುಖರನ್ನು ನಿಯೋಜಿಸಿದೆ.

ವಿಪಕ್ಷ ನಾಯಕ ಆರ್‌. ಅಶೋಕ್‌, ಮಾಜಿ ರಾಜ್ಯ ಅಧ್ಯಕ್ಷರಾದ ನಳಿನ್‌ ಕುಮಾರ್‌ ಕಟೀಲು, ವಿಧಾನಪರಿಷತ್‌ ಸದಸ್ಯರಾದ ಸಿ.ಟಿ. ರವಿ, ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹಾಗೂ ಮಾಜಿ ಸಚಿವರಾದ ಬಿ. ಶ್ರೀರಾಮುಲುಗೆ ಜವಾಬ್ದಾರಿ ನೀಡಲಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

error: Content is protected !!