ಬಿಜೆಪಿ ಸರ್ಕಾರ ಯಾವುದೇ ಮಾಧ್ಯಮ ಸಂಸ್ಥೆಗಳ ಮೇಲೆ ನಿಷೇಧ ವಿಧಿಸಿಲ್ಲ: ರಾಜನಾಥ್ ಸಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಾಧ್ಯಮ ಸಂಸ್ಥೆಗಳ ಮೇಲೆ ಬಿಜೆಪಿ ಸರ್ಕಾರ ಯಾವುದೇ ನಿಷೇಧ ವಿಧಿಸಿಲ್ಲ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಕಾಂಗ್ರೆಸ್ ಆರೋಪ ಕುರಿತಂತೆ ಮಾತನಾಡಿದ ಅವರು, 1951 ರಲ್ಲಿ 19 ನೇ ವಿಧಿಯ ತಿದ್ದುಪಡಿಯನ್ನು ಉಲ್ಲೇಖಿಸಿ ಕಾಂಗ್ರೆಸ್ ಸರ್ಕಾರ ವಾಕ್ ಸ್ವಾತಂತ್ರ್ಯ ತಡೆಯಲು ಸಂವಿಧಾನ ತಿದ್ದುಪಡಿ ಮಾಡಿದ್ದರೂ ಬಿಜೆಪಿ ಸರ್ಕಾರ ಆ ರೀತಿ ಮಾಡಿಲ್ಲ ಎಂದರು.

ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ದೇಶದಲ್ಲಿ ಮತ್ತೆ ಚರ್ಚೆ ಆರಂಭವಾಗಿದೆ. ಕುತೂಹಲಕಾರಿ ಸಂಗತಿಯೆಂದರೆ, ಮಾಧ್ಯಮ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸುವವರು ಅದು ಅಟಲ್ ಜಿ ಅಥವಾ ಮೋದಿಜಿಯವರ ಸರ್ಕಾರವಾಗಲಿ ಯಾವುದೇ ಮಾಧ್ಯಮ ಸಂಸ್ಥೆಗೆ ಯಾವುದೇ ನಿಷೇಧ ಹೇರಿಲ್ಲ, ಯಾರೊಬ್ಬರ ಅಭಿವ್ಯಕ್ತಿ ಸ್ವಾತಂತ್ರವನ್ನು ಮೊಟಕುಗೊಳಿಸಿಲ್ಲ ಎಂಬುದನ್ನು ಮರೆತುಬಿಟ್ಟಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರವು ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಲು ಸಂವಿಧಾನಕ್ಕೆ ತಿದ್ದುಪಡಿ ತಂದಿದೆ. ಗಾಜಿನ ಮನೆಗಳಲ್ಲಿ ವಾಸಿಸುವವರು ಇತರರ ಮೇಲೆ ಕಲ್ಲು ಎಸೆಯಬಾರದು ಎಂದು ಅವರು ಹೇಳಿದರು.
ಮಾಧ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿದೆ ಮತ್ತು ಅದರ ಸ್ವಾತಂತ್ರ್ಯವು ಬಲವಾದ ಪ್ರಜಾಪ್ರಭುತ್ವಕ್ಕೆ ಬಹಳ ಮುಖ್ಯವಾಗಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!