ಹರಿಯಾಣದಲ್ಲಿ ನಿರುದ್ಯೋಗ, ಭ್ರಷ್ಟಾಚಾರ, ಹಣದುಬ್ಬರಕ್ಕೆ ಬಿಜೆಪಿ ಸರ್ಕಾರವೇ ಕಾರಣ: ಪ್ರಿಯಾಂಕಾ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹರಿಯಾಣದಲ್ಲಿ ನಿರುದ್ಯೋಗ, ಭ್ರಷ್ಟಾಚಾರ ಮತ್ತು ಹಣದುಬ್ಬರಕ್ಕೆ ಬಿಜೆಪಿ ಸರಕಾರವೇ ಕಾರಣ. ಹರಿಯಾಣದಲ್ಲಿ ಕಾಂಗ್ರೆಸ್ ಅಲೆ ಹೆಚ್ಚಿದೆ. ದೇಶದಲ್ಲಿ ಅತಿ ಹೆಚ್ಚು ನಿರುದ್ಯೋಗ ಸಂಖ್ಯೆಯನ್ನು ಹೊಂದಿದೆ. ಅದಕ್ಕೆ ಇಲ್ಲಿನ ಯುವಕರು ಬೆಲೆ ತೆರುತ್ತಿದ್ದಾರೆ. ಇದಕ್ಕಾಗಿ, ಪ್ರತೀಕಾರ ಅಗತ್ಯ. ಈ ವಿಚಾರದಲ್ಲಿ ಚುನಾವಣೆಯೇ ದೊಡ್ಡ ಅಸ್ತ್ರವಾಗಲಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ.

ಬಿಜೆಪಿಯ ಅತಿರೇಕದ ಹಣದುಬ್ಬರ, ಭ್ರಷ್ಟಾಚಾರ ಮತ್ತು ಅಸ್ಥಿರತೆಯಿಂದ ಜನರು ಬೇಸತ್ತಿದ್ದಾರೆ. ಇಲ್ಲಿನ ಜನರು ದೊಡ್ಡ ಬದಲಾವಣೆಯನ್ನು ತರುತ್ತಾರೆ ಎಂದು ಪ್ರಿಯಾಂಕಾ ಗಾಂಧಿ ಎಕ್ಸ್‌ನಲ್ಲಿ ಬರೆದಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ಹೆಚ್ಚಿನ ಅಂತರದಿಂದ ಎಲ್ಲಾ ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!