ಹರಿಯಾಣದಲ್ಲಿ ಪತನದತ್ತ ಬಿಜೆಪಿ ಸರಕಾರ: ಕಾಂಗ್ರೆಸ್ ನತ್ತ 3 ಪಕ್ಷೇತರ ಶಾಸಕರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೋಕಸಭಾ ಚುನಾವಣೆಯ ನಡುವೆ ಹರಿಯಾಣದಲ್ಲಿ ಬಿರುಗಾಳಿ ಎದ್ದಿದೆ. ಬಿಜೆಪಿ ನೇತೃತ್ವದ ನಯಬ್ ಸಿಂಗ್ ಸೈನಿ ಸರ್ಕಾರದಿಂದ ಮೂವರು ಪಕ್ಷೇತರರು ಬೆಂಬಲವನ್ನು ವಾಪಸ್ ಪಡೆದಿದ್ದಾರೆ.

ಬಿಜೆಪಿಗೆ ನೀಡಿದ್ದ ಬೆಂಬಲ ವಾಪಸ್ ಪಡೆದಿರುವ ಮೂವರು ಪಕ್ಷೇತರರು ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ್ದಾರೆ.

ಪಕ್ಷೇತರ ಶಾಸಕರಾದ ಸೊಂಬೀರ್ ಸಾಂಗ್ವಾನ್, ರಂಧೀರ್ ಗೊಲ್ಲೆನ್ ಹಾಗೂ ಧರ್ಮಪಾಲ್ ಗೊಂಡರ್ ಇದೀಗ ಕಾಂಗ್ರೆಸ್‌ನತ್ತ ವಾಲಿದ್ದಾರೆ.

ಸುದ್ದಿಗೋಷ್ಠಿ ನಡೆಸಿದ ಮೂವರು ಪಕ್ಷೇತರ ಶಾಸಕರು ಬೆಂಬಲ ವಾಪಸ್ ಪಡೆದಿರುವುದಾಗಿ ಘೋಷಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್‌ಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

90 ಶಾಸಕರ ಹರಿಯಾಣ ಬಲಾಬಲದಲ್ಲಿ ಸದ್ಯ ಬಿಜೆಪಿ ಸರ್ಕಾರದ ಸಂಖ್ಯೆ 40 ಶಾಸಕರನ್ನು ಹೊಂದಿದೆ. ಮೂವರು ಪಕ್ಷೇತರ ಬೆಂಬಲ ವಾಪಸ್ ಪಡೆಯುವ ಮೊದಲೇ ಜೆಜೆಪಿ ಪಕ್ಷದ ಶಾಸಕರು ಬೆಂಬಲ ವಾಪಸ್ ಪಡೆದುಕೊಂಡಿದ್ದಾರೆ. ಇದೀಗ ಸರ್ಕಾರ ನಡೆಸಲು ನಯಬ್ ಸೈನಿ ಬಳಿ ಸಂಖ್ಯಾಬಲದ ಕೊರತೆ ಕಾಣುತ್ತಿದೆ. ನಯಬ್ ಸೈನಿ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!