ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಳೆಯ ವಾಹನಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯನ್ನು ನಿರ್ಬಂಧಿಸುವುದರ ಜೊತೆಗೆ, ದೆಹಲಿಯ ಎಲ್ಲಾ ಬಹುಮಹಡಿ ಕಟ್ಟಡಗಳು, ಹೋಟೆಲ್‌ಗಳು ಮತ್ತು ಕಮರ್ಷಿಯಲ್ ಕಾಂಪ್ರೆಕ್ಸ್ ಗಳಲ್ಲಿ ವಾಯು ಮಾಲಿನ್ಯ ಮಟ್ಟವನ್ನು ನಿಯಂತ್ರಿಸಲು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪರಿಸರ ಸಚಿವ ಮಂಜಿಂದರ್ ಸಿರ್ಸಾ ಘೋಷಿಸಿದ್ದಾರೆ.
“ನಾವು ಪೆಟ್ರೋಲ್ ಪಂಪ್‌ಗಳಲ್ಲಿ ಗ್ಯಾಜೆಟ್‌ಗಳನ್ನು ಸ್ಥಾಪಿಸುತ್ತಿದ್ದೇವೆ. ಅದು 15 ವರ್ಷಕ್ಕಿಂತ ಹಳೆಯ ವಾಹನಗಳನ್ನು ಗುರುತಿಸುತ್ತದೆ. ಅವುಗಳಿಗೆ ಯಾವುದೇ ಪೆಟ್ರೋಲ್ ಅಥವಾ ಡೀಸೆಲ್ ನೀಡುವುದಿಲ್ಲ” ಎಂದು ಮಂಜಿಂದರ್ ಸಿಂಗ್ ತಿಳಿಸಿದ್ದಾರೆ.