ವಿಧಾನಪರಿಷತ್ ಪದವೀಧರ- ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಉಸ್ತುವಾರಿಗಳ ನೇಮಕ ಮಾಡಿದ ಬಿಜೆಪಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

2024ರ ಜೂನ್ ತಿಂಗಳಿನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ವಿಧಾನಪರಿಷತ್ ಪದವೀಧರ / ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದ ಪ್ರಮುಖರನ್ನು ಉಸ್ತುವಾರಿಗಳನ್ನಾಗಿ ಬಿಜೆಪಿ ನೇಮಕ ಮಾಡಿದೆ.

ಸಂಸದ ಡಿ.ವಿ. ಸದಾನಂದಗೌಡ, ಮಾಜಿ ಸಚಿವರಾದ ಬಿ. ಶ್ರೀರಾಮುಲು, ಸಿ.ಟಿ. ರವಿ, ಆರ್. ಅಶೋಕ್, ಕೆ.ಎಸ್‌. ಈಶ್ವರಪ್ಪ, ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಶನಿವಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here