ದಿಗಂತ ವರದಿ ವಿಜಯಪುರ:
ಬಿಜೆಪಿ ರಾಜ್ಯಾಧ್ಯಕ್ಷ ಅಥವಾ ಪ್ರತಿಪಕ್ಷ ನಾಯಕನ ಸ್ಥಾನ ಪಂಚಮಸಾಲಿ ಸಮಾಜಕ್ಕೆ ನೀಡಬೇಕಿತ್ತು. ಬಿಜೆಪಿ ಮೊದಲಿನಿಂದಲು ಪಂಚಮಸಾಲಿ ನಾಯಕರನ್ನು ನಿರ್ಲಕ್ಷ್ಯ ಮಾಡುತ್ತ ಬಂದಿದೆ ಎಂದು ಕೂಡಲಸಂಗಮ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಶ್ರೀಗಳು ಟೀಕಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ ಯತ್ನಾಳರಿಗೆ ವಿರೋಧ ಪಕ್ಷದ ನಾಯಕನ ಸ್ಥಾನ ಸಿಗುವ ನಿರೀಕ್ಷೆ ಇತ್ತು, ಹುಸಿಯಾಗಿದೆ. ಉತ್ತರ ಕರ್ನಾಟಕಕ್ಕೂ ಅನ್ಯಾಯವಾಗಿದೆ. ಉತ್ತರ ಕರ್ನಾಟಕದವರಿಗೆ ವಿರೋಧ ಪಕ್ಷ ನಾಯಕ ಸ್ಥಾನ ನೀಡಬೇಕಿತ್ತು. ಇಲ್ಲವೇ ಪಂಚಮಸಾಲಿ ಸಮುದಾಯಕ್ಕಾದರು ಸಿಗಬೇಕಿತ್ತು ಎಂದು ಅಸಮಾಧಾನ ಹೊರಹಾಕಿದ್ದಾರೆ.
ಒಳ ಸಂಚಿನಿಂದ ಶಾಸಕ ಯತ್ನಾಳಗೆ ಪ್ರತಿಪಕ್ಷದ ನಾಯಕ ಸ್ಥಾನ ತಪ್ಪಿದೆ ಎಂದು ದೂರಿದರು.