ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದಲ್ಲಿ ಮೀಸಲಾತಿ ರದ್ದು ಕುರಿತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಬಿಜೆಪಿ ನಾಯಕರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ಆರಂಭಿಸಿದ್ದಾರೆ. ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಲು ಬಿಜೆಪಿ ಮುಂದಾಗಿದೆ.
ಚಿಕ್ಕಮಗಳೂರಿನಲ್ಲಿ ಬಿಜೆಪಿ ಶಾಸಕ ಸುನೀಲ್ ಕುಮಾರ್ ಮಾತನಾಡಿದ್ದು, ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ನಾಳೆ ಬಿಜೆಪಿ ಪ್ರತಿಭಟಿಸಲಿದೆ. ರಾಹುಲ್ ದೇಶದ ಜನರ ಕ್ಷಮೆ ಕೇಳಬೇಕು. ಕಾಂಗ್ರೆಸ್ ಮೀಸಲಾತಿ ವಿರೋಧಿ ವಿಚಾರ ಇಟ್ಟುಕೊಂಡು ಹೋರಾಟ. ರಾಹುಲ್ ಹೇಳಿಕೆಯಿಂದ ಎಸ್ಸಿ, ಎಸ್ಟಿ ಸಮುದಾಯ ಗಾಬರಿಯಾಗಿದೆ ಎಂದು ಹೇಳಿದ್ದಾರೆ.
ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಪ್ರತಿಕ್ರಿಯಿಸಿದ್ದು, ರಾಹುಲ್ ಗಾಂಧಿಗೆ ನಾಚಿಕೆ ಆಗಬೇಕು. ಖರ್ಗೆ, ಸಿದ್ದರಾಮಯ್ಯ ಅವರಿಗೆ ಪ್ರಶ್ನೆ ಮಾಡುತ್ತೇನೆ ಸಂವಿಧಾನ ರಕ್ಷಣೆ ಮಾಡುತ್ತೇವೆ, ಮೀಸಲಾತಿ ಉಳಿಸುತ್ತೇವೆ ಅಂದ್ರಲ್ಲಾ ಇದೇನಾ? ಎಸ್ಸಿ, ಎಸ್ಟಿಗಳನ್ನ ರಕ್ಷಣೆ ಮಾಡಬೇಕು. ಸಂವಿಧಾನ ಉಳಿಸಬೇಕು ಅಂತಿದ್ರಲ್ಲ. ರಾಹುಲ್ ಗಾಂಧಿ ಮೀಸಲಾತಿ ನಿಲ್ಲಿಸುತ್ತೇವೆ ಅಂತ ಹೇಳಿದ್ದಾರೆ. ನಾಳೆ ಮತ್ತು ನಾಡಿದ್ದು ರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರತಿಕೃತಿ ದಹನ ಮಾಡುತ್ತೇವೆ. ಅಂಬೇಡ್ಕರ್ ಸೋಲಿಸಿದ್ದು ಇದೇ ಕಾಂಗ್ರೆಸ್ ಎಂದು ವಾಗ್ದಾಳಿ ಮಾಡಿದ್ದಾರೆ.