ಗುಜರಾತಿನಲ್ಲಿ ಶಾಶ್ವತ ಶಾಂತಿ ಸ್ಥಾಪಿಸಿದ ಬಿಜೆಪಿ: ಗೃಹ ಸಚಿವ ಅಮಿತ್ ಶಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗುಜರಾತ್ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿಗಳ ಬೆಂಬಲಿಸಿ ಖೇಡಾ ಜಿಲ್ಲೆಯ ಮಹುಧಾ ಪಟ್ಟಣದಲ್ಲಿ ನಡೆದ ರ್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಬೆಂಬಲಿಸಿದ್ದರಿಂದ ಸಮಾಜ ವಿರೋಧಿ ಶಕ್ತಿಗಳು ಗುಜರಾತ್‌ನಲ್ಲಿ ಹಿಂಸಾಚಾರದಲ್ಲಿ ತೊಡಗಿದ್ದರು. ಆದರೆ 2002 ರಲ್ಲಿ ದುಷ್ಕರ್ಮಿಗಳಿಗೆ ಪಾಠ ಕಲಿಸಿದ ನಂತರ ಅವರು ಅಂತಹ ಚಟುವಟಿಕೆಗಳನ್ನು ನಿಲ್ಲಿಸಿದರು ಈ ಮೂಲಕ ಬಿಜೆಪಿ ಗುಜರಾತಿನಲ್ಲಿ ಶಾಶ್ವತ ಶಾಂತಿ ಸ್ಥಾಪಿಸಿತು ಎಂದು ಹೇಳಿದ್ದಾರೆ.

ಗುಜರಾತ್‌ನಲ್ಲಿ (1995 ರ ಮೊದಲು) ಕಾಂಗ್ರೆಸ್ ಆಳ್ವಿಕೆಯಲ್ಲಿ ಕೋಮು ಗಲಭೆಗಳು ಹೆಚ್ಚಾಗಿದ್ದವು. ಸಮುದಾಯಗಳು ಮತ್ತು ಜಾತಿಗಳು ಪರಸ್ಪರ ವಿರುದ್ಧ ಹೋರಾಡಲು ಇಂತಹ ಗಲಭೆಗಳ ಮೂಲಕ ಕಾಂಗ್ರೆಸ್ ತನ್ನ ಮತ ಬ್ಯಾಂಕ್ ಅನ್ನು ಬಲಪಡಿಸಿತು. ಈ ಮೂಲಕ ಸಮಾಜದ ದೊಡ್ಡ ವರ್ಗಕ್ಕೆ ಅನ್ಯಾಯ ಮಾಡಿದೆ.ಅದಕ್ಕೆ ಸಾಕ್ಷಿ ಅಂತೇ 2002 ರಲ್ಲಿ ನಡೆದ
ಗುಜರಾತ್ ಗಲಭೆ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

2002 ರ ಬಳಿಕ ಬಿಜೆಪಿ ಅಧಿಕಾರಕ್ಕೆ ಬಂತು . ಈ ಮೂಲಕ ಹಿಂಸಾಚಾರಗಳು ತೊರೆದವು. ಶಾಶ್ವತ ಶಾಂತಿ ನೆಲೆಯಿತು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!