ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರುಕೊಟ್ಟ ಬಿಜೆಪಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ (Election Commission of India) ದೂರು ನೀಡಿದೆ.

ʼಶಕ್ತಿ ವಿರುದ್ಧದ ಹೋರಾಟ ‘ ಹೇಳಿಕೆ ಮತ್ತು ಎಲೆಕ್ಟ್ರಾನಿಕ್ ಮತಯಂತ್ರಗಳ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಅವರು ದೆಹಲಿಯಲ್ಲಿರುವ ಭಾರತೀಯ ಚುನಾವಣಾ ಆಯೋಗದ ಕಚೇರಿಗೆ ಆಗಮಿಸಿ ರಾಹುಲ್‌ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಹಲವಾರು ಹೇಳಿಕೆಗಳನ್ನು ನೀಡಿದೆ. ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳುವಂತೆ ನಾವು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ. ಕಾಂಗ್ರೆಸ್ ಈ ರೀತಿಯ ಸುಳ್ಳುಗಳನ್ನು ಮುಂದುವರಿಸಿವುದರ ಕುರಿತು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!