Sunday, September 25, 2022

Latest Posts

ಕಾಂಗ್ರೆಸ್ ಆರೋಪಕ್ಕೆ ದಾಖಲೆ ಸಹಿತ ತಿರುಗೇಟು ನೀಡಿದ ಬಿಜೆಪಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸರ್ಕಾರಿ ಜಾಹಿರಾತಿನಲ್ಲಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಚಿತ್ರ ರಾಜ್ಯ ಸರಕಾರ ಕೈ ಬಿಟ್ಟಿದ್ದಾರೆ ಎಂದು ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿರುವ ಬಿಜೆಪಿ, ಕಾಂಗ್ರೆಸ್ ಗೆ ಇಷ್ಟು ಬೇಗ ನೆಹರು ಮುಖ ಮರೆಯಿತೇ ಅಥವಾ ಇದು ಜಾಣ ಕುರುಡೋ? ಎಂದು ಕುಟುಕಿದೆ.

ರಾಜ್ಯ ಸರಕಾರ ಇಂದು ಮುದ್ರಣ ಮಾಧ್ಯಮಗಳಿಗೆ ನೀಡಿದ್ದ ಜಾಹಿರಾತಿನಲ್ಲಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಚಿತ್ರ ಕೈ ಬಿಟ್ಟಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದಾರೆ. ಅತ್ತ ಸಿದ್ದರಾಮಯ್ಯ ಅವರೂ ಕೂಡ ಸರ್ಕಾರದ ವಿರುದ್ಧ ಹರಿಹಾಯ್ದಿದ್ದು, ಜನರ ತೆರಿಗೆ ಹಣದಿಂದ ನೀಡಿರುವ ಜಾಹೀರಾತಿನಲ್ಲಿ ಧೀಮಂತ ಸ್ವಾತಂತ್ರ್ಯ ಹೋರಾಟಗಾರ ನೆಹರೂ ಅವರಿಗೆ ಮಾಡಿರುವ ಅವಮಾನವನ್ನು ಸಹಿಸಲಾಗದು. ಈ ಅವಮಾನಕ್ಕಾಗಿ ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದು ಮುಖ್ಯಮಂತ್ರಿಯನ್ನು ಆಗ್ರಹಿಸಿದ್ದಾರೆ.

 

ಇದೇ ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿರುವ ಬಿಜೆಪಿ, ತನ್ನದೇ ಜಾಹಿರಾತು ಮರು ಹಂಚಿಕೆ ಮಾಡಿಕೊಂಡಿದ್ದು, ಅದರೊಟ್ಟಿಗೆ, ‘ಕಾಂಗ್ರೆಸ್ ಪಕ್ಷಕ್ಕೆ ತನ್ನ ಯಜಮಾನ ನೆಹರೂ ಅವರನ್ನು ಗುರುತಿಸಲಾಗದಷ್ಟು ಮಂಪರು ಕವಿದಿದೆಯೇ? ಕಾಂಗ್ರೆಸ್ ಇಷ್ಟು ಬೇಗ ನೆಹರು ಮುಖ ಮರೆಯಿತೇ ಅಥವಾ ಇದು ಜಾಣ ಕುರುಡೋ? ಎಂದು ಪ್ರಶ್ನಿಸಿದೆ.

 

ಸರ್ಕಾರಿ ಜಾಹಿರಾತಿನಲ್ಲಿ ನೆಹರೂ ಅವರ ಚಿತ್ರವಿದ್ದು, ಅದನ್ನು ಗುರುತಿಸಲಾಗದಷ್ಟರ ಮಟ್ಟಿಗೆ ಕಾಂಗ್ರೆಸ್ ಅವರನ್ನು ಮರೆತು ಹೋಗಿದೆ ಎಂದು ಟೀಕಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!