ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ , ಸುನೀಲ್ ಜಾಖರ್ ಅವರನ್ನು ಬಿಜೆಪಿ ತನ್ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ನೇಮಕ ಮಾಡಿದೆ ಎಂದು ಬಿಜೆಪಿ ಪಕ್ಷ ತಿಳಿಸಿದೆ.
ಇನ್ನು ಮಾಜಿ ಕಾಂಗ್ರೆಸ್ ವಕ್ತಾರ ಜೈವೀರ್ ಶೆರ್ಗಿಲ್ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ .
ಮದನ್ ಕೌಶಿಕ್, ವಿಷ್ಣು ದೇವ್ ಸಾಯಿ, ಉತ್ತರಾಖಂಡ ಮತ್ತು ಛತ್ತೀಸ್‌ಗಢದ ಮಾಜಿ ಅಧ್ಯಕ್ಷರು, ರಾಣಾ ಗುರ್ಮಿತ್ ಸಿಂಗ್ ಸೋಧಿ, ಮನೋರಂಜನ್ ಕಾಲಿಯಾ ಮತ್ತು ಪಂಜಾಬ್‌ನ ಅಮನ್‌ಜೋತ್ ಕೌರ್ ರಾಮೂವಾಲಿಯಾ ಅವರನ್ನು ರಾಷ್ಟ್ರೀಯ ಕಾರ್ಯಕಾರಿಣಿಗೆ ವಿಶೇಷ ಆಹ್ವಾನಿತರನ್ನಾಗಿ ಮಾಡಲಾಗಿದೆ.
ಸೆಪ್ಟೆಂಬರ್‌ನಲ್ಲಿ ಅಮರಿಂದರ್ ಸಿಂಗ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.