ನೇಹಾ ಕೇಸ್‌ ಸಿಬಿಐಗೆ ವಹಿಸಿ ಅಂತ ಕೇಳೋಕೆ ಬಿಜೆಪಿಗೆ ನೈತಿಕತೆ ಇಲ್ಲ: ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನೇಹಾ ಹತ್ಯೆ ಪ್ರಕರಣವನ್ನು ಸಿಐಬಿಗೆ ವಹಿಸಬೇಕು ಅನ್ನೋ ಗಾಂಭೀರ್ಯತೆ ನಮಗೂ ಇದೆ. ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ಕೇಳುವ ನೈತಿಕತೆ ಬಿಜೆಪಿಗೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಅನೇಕ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆ. ಈಗ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿದ್ದೇವೆ. ಆಕೆಯ ಕುಟುಂಬಕ್ಕೆ ಶೀಘ್ರವೇ ನ್ಯಾಯ ಒದಗಿಸುತ್ತೇವೆ. ಬಿಜೆಪಿ ಸರ್ಕಾರ ಇದ್ದಾಗ ಯಾವ ಪ್ರಕರಣ ಸಿಬಿಐಗೆ ವಹಿಸಿದ್ದಾರೆ ಹೇಳಿ? ತಮ್ಮ ಸರ್ಕಾರದಲ್ಲಿ ಆಗದ್ದನ್ನು ನಮ್ಮ ಸರ್ಕಾರದಲ್ಲಿ ಮಾಡಿ ಎಂದು ಕೇಳೋ ನೈತಿಕ ಹಕ್ಕು ಅವರಿಗಿಲ್ಲ ಎಂದು ಹೇಳಿದ್ದಾರೆ.

ನೇಹಾ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವುದು ನಮ್ಮ ಉದ್ದೇಶವಾಗಿದ್ದು ಅದನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ, ಇದರಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ ಎಂದು ಕಿಡಿಕಾರಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!