ಹೊಸದಿಗಂತ ವರದಿ, ಹುಬ್ಬಳ್ಳಿ:
ಬಿಜೆಪಿಯಲ್ಲಿ ಒಂದೇ ಮನೆ. ಬಿ.ಎಸ್.ಯಡಿಯೂರಪ್ಪ ಪ್ರಶ್ನಾತೀತ ನಾಯಕರಾಗಿದ್ದಾರೆ. ಆದರೆ ಕಾಂಗ್ರೆಸ್ ಎರಡು ಸ್ಟೇರಿಂಗ್ ಬಸ್ ಆಗಿದ್ದು, ಬಿಜೆಪಿ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಅವರಿಗಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ ಹೇಳಿದರು.
ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಹಾಗೂ ಸಿಎಂ ಬೊಮ್ಮಾಯಿಯವರ ನಡುವೆ ಯಾವುದೇ ಭಿನ್ನಾಭಿಪ್ರಾಯ ವಿಲ್ಲ. ಬಿಜೆಪಿಯ ಒಗ್ಗಟ್ಟನ್ನು ಸಹಿಸದೆ ವಿರೋಧ ಪಕ್ಷದವರು ಹೀಗೇ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಪ್ರೀಯಾಂಕ ಖರ್ಗೆ ಹೇಳಿಕೆಗೆ ಪ್ರತಿಕ್ರಿಸಿದರು.
ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಬಳಿಕ ಸಿಎಂ ಬೊಮ್ಮಾಯಿಯವರು ಹಾಲು ಜೇಜಿನಂತೆ ಕೆಲಸ ಮಾಡುತ್ತಿದ್ದಾರೆ. ಈ ವಿಚಾರ ಅವರಿಗೆ ಸಹಿಸೋಕೆ ಆಗುತ್ತಿಲ್ಲ. ಕಾಂಗ್ರೆಸ್‌ನಲ್ಲಿ ಪ್ರೀಯಾಂಕ ಖರ್ಗೆ ಅವರ ತಂದೆ ರಾಷ್ಟ್ರೀಯ ಅಧ್ಯಕ್ಷರಾಗಿರುವುದು ಯಾರಿಗೂ ಸಂತೋಷವಿಲ್ಲ. ಸದ್ಯ ಅವರ ಪಕ್ಷದಲ್ಲಿ ದೆಹಲಿ, ರಾಮನಗರ ಹಾಗೂ ಮೈಸೂರು ಬಾಗಿಲುಗಳಿವೆ ಎಂದು ವ್ಯಂಗ್ಯವಾಡಿದರು.
ಬಿ.ಎಸ್. ಯಡಿಯೂರಪ್ಪ ಅವರನ್ನು ಯಾವುದೇ ಕಾರಣಕ್ಕೂ ಕಡೆಗಣಿಸಿಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಕಾರ್ಯಕ್ರಮಕ್ಕೆ ಆಹ್ವಾನಿಸಿದ ವಿಚಾರ ನನಗೆ ಗೊತ್ತಿಲ್ಲ ಎಂದರು.