40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ಮಾಡುತ್ತಿದ್ದು, ಈಗಾಗಲೇ 222 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ.

ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಸ್ಟಾರ್ ಪ್ರಚಾರಕರಿಂದ ಬೃಹತ್ ಸಾರ್ವಜನಿಕ ರ್ಯಾಲಿಗಳು, ರೋಡ್ ಶೋಗಳು ಮತ್ತು ಸಮಾವೇಶಗಳನ್ನು ನಡೆಸಲು ಸಿದ್ಧತೆ ಮಾಡಿಕೊಂಡಿದೆ. ಈ ಸಂಬಂಧ ಬಿಜೆಪಿಯಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಅನೇಕರು ಸ್ಟಾರ್ ಪ್ರಚಾರಕರಾಗಿ ರಾಜ್ಯದಲ್ಲಿ ಪ್ರಚಾರ ಮಾಡಲಿದ್ದಾರೆ.

ರಾಜನಾಥ್​ ಸಿಂಗ್​, ನಿತಿನ್ ಗಡ್ಕರಿ, ಪ್ರಹ್ಲಾದ್ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್​ಕುಮಾರ್​ ಕಟೀಲು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಿ.ಟಿ.ರವಿ, ಅಣ್ಣಾಮಲೈ, ಸಂಸದ ಜಗ್ಗೇಶ್​​, ಶ್ರುತಿ, ತಾರಾ ಸೇರಿದಂತೆ ಹಲವರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!